ಹಾಸನ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಕೆಪಿಆರ್‌ಎಸ್‌ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಈ ಹಲ್ಲೆ ಮಾಡಿದ ಗೂಂಡಾಗಳನ್ನು ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೆ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬಾಗಲಕೋಟೆ | ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಜನರು ಪಾಠ ಕಲಿಸುತ್ತಾರೆ: ರೈತ ಮುಖಂಡ ಯಲ್ಲಪ್ಪ ಹೆಗಡೆ

ಈ ಬಗ್ಗೆ ಕೆಪಿಆರ್‌ಎಸ್‌ ಪ್ರಕಟಣೆ ಬಿಡುಗಡೆ ಮಾಡಿದೆ. “ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಮನೆ ವೃತ್ತದಲ್ಲಿ ಗ್ರಂಥಾಲಯವಿತ್ತು. ಈ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸಾರ್ವಜನಿಕರ ಉಪಯೋಗಕ್ಕಾಗಿ ಇದನ್ನು ದುರಸ್ತಿಗೊಳಿಸಿ, ಕಟ್ಟಡವನ್ನು ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಅನುಗುಣವಾಗಿ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಅಭಿವೃದ್ಧಿಗೊಳಿಸಲು ವಾಸುದೇವ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಪಂಚಾಯತಿ ಆಸ್ತಿ ಕಬಳಿಸುವ ದುರುದ್ದೇಶ ಹೊಂದಿದ್ದ, ಇದೇ ಸರ್ವೆ ನಂಬರ್‌ಗೆ ಹೊಂದಿಕೊಂಡು ಇರುವ ಬಹು ಕೋಟಿ ಬೆಲೆ ಬಾಳುವ ಸುಮಾರು 11 ಎಕರೆ ಸರ್ಕಾರಿ ಭೂಮಿ ಕಬಳಿಸುವ ದುರುದ್ದೇಶದಿಂದ ಆಶೋಕ ನೇತೃತ್ವದ ಸುಮಾರು ಎಂಟು ಜನರಷ್ಟು ಇದ್ದ ಗೂಂಡಾಗಳು ಏಪ್ರಿಲ್ 8ರಂದು ಸಂಜೆ 6:30 ರ ಸಮಯದಲ್ಲಿ ಗ್ರಂಥಾಲಯ ದುರಸ್ತಿ ಕಾರ್ಯ ಮೇಲ್ವಿಚಾರಣೆ ನಡೆಸುತ್ತಿದ್ದ ವಾಸುದೇವ ಅವರ ಮೇಲೆ ಹಲ್ಲೆ ನಡೆಸಿದೆ. ಗೂಂಡಾಗಳು ಗ್ರಂಥಾಲಯ ದುರಸ್ತಿ ಕಾರ್ಯ ನಿಲ್ಲಿಸುವಂತೆ ಜೀವ ಬೆದರಿಕೆ ಹಾಕಿದ್ದಾರೆ. ಸ್ಥಳೀಯ ಜನರ ಸಕಾಲಿಕ ಮಧ್ಯಪ್ರವೇಶದಿಂದ ವಾಸುದೇವರವರ ಪ್ರಾಣ ಉಳಿದಿದೆ” ಎಂದು ಹೇಳಿದೆ.

“ಆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆ ನುಗ್ಗೇಹಳ್ಳಿ ಪಿಎಸ್ ಐ ರವರಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಭೇಟಿ ನೀಡಲು ಮತ್ತು ದೂರು ದಾಖಲಿಸಿಕೊಳ್ಳಲು ಅನಗತ್ಯ ವಿಳಂಬ ಮಾಡಿದ್ದಾರೆ. ಈ ಮೂಲಕ ದೌರ್ಜನ್ಯ ನಡೆಸಿದ ಗೂಂಡಾಗಳ ರಕ್ಷಣೆಗೆ ಯತ್ನಿಸಿದ್ದಾರೆ. ಇಂತಹ ಗಂಭೀರ ಸ್ವರೂಪದ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆದಾಗಲೂ ದೂರು ತೆಗೆದುಕೊಳ್ಳಲು ನಿರಾಕರಿಸಿದ ಕುರಿತು ಇಲಾಖೆ ವಿಚಾರಣೆ ನಡೆಸಬೇಕು. ಎಲ್ಲ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು” ಕೆಪಿಆರ್‌ಎಸ್‌ ಗೃಹ ಸಚಿವರನ್ನು ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...