ಕೊಪ್ಪಳ | ವಿದ್ಯುತ್‌ ಬಿಲ್‌ ವಸೂಲಿಗೆ ತೆರಳಿದ್ದ ಲೈನ್‌ಮನ್‌ಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ

Date:

  • ಆರು ತಿಂಗಳಿಂದಲೂ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದ ವ್ಯಕ್ತಿ
  • 200 ಯುನಿಟ್‌ ಉಚಿತ ವಿದ್ಯುತ್‌ ಗ್ಯಾರಂಟಿ ನೀಡಿದ್ದ ಕಾಂಗ್ರೆಸ್‌

ರಾಜ್ಯದಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ಪಾವತಿ ವಿಚಾರದಲ್ಲಿ ಲೈನ್​ಮನ್​ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿವೆ. ಅಧಿಕಾರಕ್ಕೆ ಬಂದರೆ 200 ಯೂನಿಟ್​ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು. ಇದೀಗ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿರುವ ಹಿನ್ನೆಲೆ ಕೆಲವರು ವಿದ್ಯುತ್​ ಬಿಲ್ ಕಟ್ಟುವುದಿಲ್ಲ ಎಂದು ಲೈನ್​ಮನ್​ಗಳ ಜತೆ ಜಗಳಕ್ಕೆ ಇಳಿದಿದ್ದಾರೆ.

ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವಿದ್ಯುತ್​ ಬಿಲ್​ ವಸೂಲಿಗೆ ಹೋಗಿದ್ದ ಲೈನ್​ಮನ್​ ಮೇಲೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ್ದಾನೆ.

ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬುವವರು ವಿದ್ಯುತ್​ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್​ ಪಾವತಿ ಮಾಡದ ಹಿನ್ನೆಲೆ ಬಿಲ್​ ವಸೂಲಾತಿಗೆಂದು ಅವರ ಮನೆಗೆ ಲೈನ್​ಮನ್​ ಮಂಜುನಾಥ್​ ಎಂಬುವರು ತೆರಳಿದ್ದರು. ಬಿಲ್​ ಪಾವತಿಸುವಂತೆ ಚಂದ್ರಶೇಖರಯ್ಯ ಅವರನ್ನು ಕೇಳಿದರೆ, ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್​ ಕಟ್ಟುವುದಿಲ್ಲ. ವಿದ್ಯುತ್​ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು, ಫೀಲ್ಡ್‌ಗೆ ಹೋಗಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸರ್ಕಾರ ಇನ್ನು ಅಧಿಕೃತವಾಗಿ ಜಾರಿ ಮಾಡಿಲ್ಲ. ಜಾರಿ ಮಾಡಿದ ಬಳಿಕ ನೋಡೋಣ, ಸದ್ಯಕ್ಕೆ ಹಳೆಯ ಬಿಲ್​ ಅನ್ನು ಪಾವತಿಸಿ ಎಂದು ಮಂಜುನಾಥ್​ ಕೇಳಿದ್ದಾರೆ. ಆದರೆ, ಬಿಲ್​ ಕಟ್ಟಲು ಒಪ್ಪದ ಚಂದ್ರಶೇಖರಯ್ಯ, ಅವಾಚ್ಯ ಶಬ್ದಗಳಿಂದ ಮಂಜುನಾಥ್​ರನ್ನು ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಮಂಜುನಾಥ್​ ಮೇಲೆ ಚಂದ್ರಶೇಖರಯ್ಯ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ.

ಹಲ್ಲೆ ನಡೆಸಿದ ಚಂದ್ರಶೇಖರಯ್ಯ ವಿರುದ್ಧ ಮಂಜುನಾಥ್​, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪ್ರಧಾನಿ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡುವೆ: ಮಾಜಿ ಸಚಿವ ಕಿಮ್ಮನೆ ರತ್ನಾಕರ್

ʼಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆʼ ಎನ್ನುವ ಮೂಲಕ...

ಬೀದರ್‌ | ಪ್ರೇಯಸಿ ಮದುವೆ ದಿನವೇ ಯುವಕ ನಿಗೂಢ ಸಾವು; ಕೊಲೆ ಶಂಕೆ

ಪ್ರೇಯಸಿಯ ಮದುವೆ ದಿನವೇ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಬೀದರ್‌...

ಬೀದರ್‌ | ಎದೆಯ ಮೇಲೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ...