ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ

Date:

  • ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ
  • ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಮೇಲೂ ದಾಳಿ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೊಪ್ಪಳ, ದಾವಣಗೆರೆ, ಕೊಡಗು, ಬೀದರ್‌ ಹಾಗೂ ಧಾರವಾಡ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಮೇಲೆ ಈ ದಾಳಿ ನಡೆದಿದೆ.

- Advertisement -

ಧಾರವಾಡ
ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿ ಸಂತೋಷ್ ಅನಿ ಶೆಟ್ಟರ ಮನೆಗೆ ಆಯುಕ್ತ ಪೊಲೀಸರು ದಾಳಿ ಮಾಡಿದ್ದು, ಧಾರವಾಡದ ಮಿಚಿಗನ್ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತುಮಕೂರು
ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಮನೆ ಹಾಗೂ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ನಗರದ ದೇವನೂರು ಚರ್ಚ್ ಬಳಿ ಇರುವ ನಾಗರಾಜು ಮನೆ ಮತ್ತು ನಗರದ ಬೆಳಗುಂಬ ರಸ್ತೆಯಲ್ಲಿರುವ ಟೂಡಾ (ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ) ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು
ದೇವನಹಳ್ಳಿಯ ಗ್ರೇಡ್- 2 ತಹಶೀಲ್ದಾರ್ ಶಿವರಾಜ್, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಸೇರಿದಂತೆ ನಾಲ್ವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ತುಮಕೂರು ಜನಸ್ಪಂದನ ಕಚೇರಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೂವನಹಳ್ಳಿ ನಾಗರಾಜ್‌, ಲಂಚ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬಂಧಿತರಾಗಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ದಾಳಿಗೊಳಗಾದವರಲ್ಲಿ ಸೇರಿದ್ದಾರೆ.

ಭೂವನಹಳ್ಳಿ ನಾಗರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ನಿವೃತ್ತರಾಗಿದ್ದರು. ಬಳಿಕ ಜನಸ್ಪಂದನ ಕಚೇರಿಯ ಸಿಇಒ ಹುದ್ದೆಗೆ ನೇಮಕಗೊಂಡಿದ್ದರು. ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಈ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಿಗೆ ಸಂಬಂಧಿಸಿದಂತೆ 23 ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಿನ ಯುದ್ಧದಲ್ಲಿ ಮಾನ ಕಳೆದುಕೊಳ್ಳುತ್ತಿರುವ ನಾಯಕರು

ಚಿಕ್ಕಬಳ್ಳಾಪುರ
ಬೆಂಗಳೂರಿನ ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮಿಪತಿ ಅವರಿಗೆ ಸೇರಿದ ತಾಲ್ಲೂಕಿನ ಕೋಡೂರು ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೋಡೂರಿನಲ್ಲಿ ಮೂರು ಎಕರೆ ಜಮೀನು ಹಾಗೂ ತೋಟದ ಮನೆ ಇದೆ. ಬೆಳಿಗ್ಗೆಯೇ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ರಾಮನಗರ
ಬೆಂಗಳೂರಿನ ಬಿಬಿಎಂಪಿ ಮಹದೇವಪುರ ವಲಯದ ಕಂದಾಯ ನಿರೀಕ್ಷಕ ನಟರಾಜ್‌ ಅವರಿಗೆ ಸೇರಿರುವ ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿಯಲ್ಲಿರುವ ತೋಟದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಶಿವನಹಳ್ಳಿಯವರಾದ ನಟರಾಜ್ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿತ್ತು. ಹಾಗಾಗಿ, ನಟರಾಜ್‌ ಅವರ ಸ್ವಂತ ಊರಿನಲ್ಲಿ ಕಟ್ಟಿರುವ ಭವ್ಯ ಬಂಗಲೆಗೆ ದಾಳಿ ನಡೆಸಿ ಹಾಗೂ ಸಮೀಪದಲ್ಲಿರುವ 7.5 ಎಕರೆ ತೆಂಗಿನತೋಟ, ಅಡಿಕೆ ತೋಟದ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.

ಕೊಡಗು
ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಹಾಗೂ ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ನಿವಾಸದ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ನಂಜುಂಡೇಗೌಡ ಅವರ ಇಲ್ಲಿನ ನಿವಾಸ ಹಾಗೂ ಕಚೇರಿ, ಮೈಸೂರಿನ ಇವರ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ಮೈಸೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ದಾವಣಗೆರೆ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಕೆ.ಮಹೇಶ್‌ ಹಾಗೂ ಪತ್ನಿ ಬಿಬಿಎಂಪಿ ಎಇ ಎಚ್. ಭಾರತಿ ಅವರ ಜಯನಗರದಲ್ಲಿನ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ‍15 ಲಕ್ಷ ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.‌

ಕೊಪ್ಪಳ
ಕೊಪ್ಪಳದ ನಿರ್ಮಿತಿ ಕೇಂದ್ರದಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ಮಂಜುನಾಥ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿದೆ. ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿಯಲ್ಲಿ ರಾಯಚೂರಿನಿಂದ ಬಂದಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಮಂಜುನಾಥ ಹೂಡಿಕೆ ಮಾಡಿರುವ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ನ ಮೇಲೂ ದಾಳಿ ನಡೆದಿದೆ.

ಬೀದ‌ರ್
ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಜಯಕುಮಾರ ಎಂಬುವರ ಎರಡು ಮನೆಗಳ ಮೇಲೆ ಲೋಕಾಯುಕ್ತ
ಪೊಲೀಸರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೀದರ್ ತಾಲ್ಲೂಕಿನ ಹೊಸಕನಹಳ್ಳಿ ಗ್ರಾಮ ಹಾಗೂ
ಹುಮನಾಬಾದ್‌ ಪಟ್ಟಣದ ಟೀಚರ್ಸ್‌ ಕಾಲೊನಿಯಲ್ಲಿನ ಅವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...