ಧಾರವಾಡ | ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನ; ಆರ್ ಅಶೋಕ್ ಸೇರಿ ಬಿಜೆಪಿಗರು ಪೊಲೀಸರ ವಶಕ್ಕೆ

Date:

Advertisements

ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್‌ ಠಾಣೆಗೆ ಮುತ್ತಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆಗೆ ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

30 ವರ್ಷಗಳ ಹಿಂದೆ, 1992ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕರಸೇವಕ ಶ್ರೀಕಾಂತ್ ಪೂಜಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಂಧನವನ್ನು ಖಂಡಿಸಿ ಆರ್‌ ಅಶೋಕ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ನಡೆದಿದೆ.

ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನಿಸುವುದಕ್ಕೂ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡದ ಆರ್‌ ಅಶೋಕ್, “ಶ್ರೀಕಾಂತ ಪೂಜಾರ ಬಂಧನಕ್ಕೆ ಮುನ್ನ ಬಂಧನ ಪೂರ್ವ ವಾರಂಟ್ ಮಾಡಿದ್ದರೆ? ಪೊಲೀಸ್‌ ದಾಖಲೆಯಲ್ಲಿ ಎಫ್‌ಐಆರ್‌ ಇದೆಯೇ? ದೂರು ಪ್ರತಿಗಳಿವೆಯೇ” ಎಂದು ಪ್ರಶ್ನಿಸಿದ್ದಾರೆ.

Advertisements

“ನ್ಯಾಯಾಲಯ ರಜೆ ಇದ್ದಾಗ ಆರೋಪಿಯನ್ನು ಬಂಧಿಸಬಾರದೆಂಬ ನಿಯಮವಿದೆ. ಆದರೂ, ಯಾರು ನಿರ್ದೇಶನದ ಮೇಲೆ ಶ್ರೀಕಾಂತನನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ 69,000 ಎಲ್‌ಪಿಆರ್ ಪ್ರಕರಣಗಳಿವೆ. ಅವುಗಳಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪ್ರಶ್ನಿಸಿದ್ದಾರೆ.

“ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿರುದ್ಧವೂ ಪ್ರಕರಣಗಳಿವೆ. ಆದರೆ, ಅವರ ಬಂಧನವನ್ನು ವಿರೋಧಿಸುತ್ತಾರೆ. ಶ್ರೀಕಾಂತನನ್ನು ಬಂಧಿಸುತ್ತಾರೆ. ಪೊಲೀಸರು ಸರ್ಕಾರದ ಮಾತು ಕಳೆದೆ, ವಿಚಾರ ಮಾಡಬೇಕು. ರಾಮ ಭಕ್ತರನ್ನ ಕೆಣಕಿ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರತಿಭಟನೆ ಬಳಿಕ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು, ಈ ವೇಳೆ, ಆರ್ ಅಶೋಕ್, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X