ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕಾರ್ಮಿಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.
ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿಗೆ 1 ಸಾವಿರ ಕೆಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್
ಪೊಲೀಸ್ ಮತ್ತು ಅಗ್ನಿಶಾಮಕ ಠಾಣೆ ಇಲಾಖೆ ಅಧಿಕಾರಿಗಳು ಸೇರಿದಂತೆ ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳು ಅಮಾನತು ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮುಖ್ಯಮಂತ್ರಿಯ ಸೂಚನೆ ಬೆನ್ನಲ್ಲೇ ಇದೀಗ ಕರ್ತವ್ಯ ಲೋಪ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.