ಅತ್ತಿಬೆಲೆ ಪಟಾಕಿ ದುರಂತ | ಮೃತರ ಕುಟುಂಬಸ್ಥರಿಗೆ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

Date:

ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ 14 ಜನರು ಮೂಲತಃ ತಮಿಳುನಾಡಿನವರಾಗಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.

- Advertisement -

ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ ಅತ್ತಿಬೆಲೆ ಗಡಿ ಚೆಕ್‌ಪೋಸ್ಟ್‌ನಿಂದ 500 ಮೀಟರ್‌ಗಿಂತ ಕಡಿಮೆ ದೂರದಲ್ಲಿರುವ ಸಗಟು ಪಟಾಕಿ ಗೋದಾಮು ಶ್ರೀಬಾಲಾಜಿ ಟ್ರೇಡರ್ಸ್‌ನಲ್ಲಿ ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು 14 ಜನರು ಸಾವನ್ನಪ್ಪಿದ್ದಾರೆ. ಇನ್ನು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಮಿಳುನಾಡಿನ ಆರೋಗ್ಯ ಮತ್ತು ಆಹಾರ ಸಚಿವರು ಹಾಗೂ ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ.

ಕರ್ನಾಟಕ ಸರ್ಕಾರದಿಂದ ₹5 ಲಕ್ಷ ಪರಿಹಾರ

ಶನಿವಾರ(ಅಕ್ಟೋಬರ್ 07) ತಡರಾತ್ರಿ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ.

ಅಗ್ನಿ ದುರಂತದಲ್ಲಿ 14 ಕಾರ್ಮಿಕರು ಸಾವೀಗಿಡಾಗಿದ್ದು, ಮೂವರಿಗೆ ಗಾಯಗಳಾಗಿವೆ. ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆ, ಕಲ್ಲಕುರುಚಿ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇದರಲ್ಲಿ ಎಂಟು ಜನ ಯುವಕರು ಧರ್ಮಪುರಿ ಜಿಲ್ಲೆ ಹರೂರ್ ತಾಲೂಕಿನ ಅಮ್ಮಾಪೇಟ್ಟೈ ನಿವಾಸಿಗಳು ಎಂದು ಮಾಹಿತಿ ದೊರೆತಿದೆ.

ಧರ್ಮಪುರಿ ಜಿಲ್ಲೆಯ ಎಂಟು ಯುವಕರು ಸಾವು

ಪ್ರಕಾಶ್ (20), ವೆಟ್ಟಪ್ಪನ್(25), ಆದಿಕೇಶವನ್(23), ವಿಜಯರಾಘವನ್(20), ಇಳಂಬರುತಿ(19), ಆಕಾಶ್(23), ಗಿರಿ(22), ಸಚಿನ್(22) ಮೃತ ಯುವಕರು.

ಕಲ್ಲಕುರುಚಿ ಜಿಲ್ಲೆಯ ಮೂವರು ಯುವಕರು ಸಾವು

ಪ್ರಭಾಕರನ್(17), ವಸಂತರಾಜ್(23), ಅಪ್ಪಾಸ್(23) ಮೃತರು. ಇನ್ನೂ ಮೂವರ ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಮೃತದೇಹಗಳು ಅತ್ತಿಬೆಲೆಯ ಆಕ್ಸ್​ಫರ್ಡ್​ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಬಾಲಾಜಿ ಪಟಾಕಿ ಗೋದಾಮು ಮಾಲಿಕ ರಾಮಸ್ವಾಮಿ ರೆಡ್ಡಿ ಮಗ ನವೀನ್, ರಾಜೇಶ್​ ಮತ್ತು ವೆಂಕಟೇಶ್​. ಸಂಜಯ, ಚಂದ್ರು, ಪೌಲ್​ ಕಬೀರ್​​. ಇವರನ್ನು ಅತ್ತಿಬೆಲೆಯ ಆಕ್ಸ್​ಫರ್ಡ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆನೇಕಲ್ ಉಪ ವಿಭಾಗದ ಅತ್ತಿಬೆಲೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ಮೃತ ಕಾರ್ಮಿಕರಲ್ಲಿ ಒಂದೇ ಗ್ರಾಮದ 8 ವಿದ್ಯಾರ್ಥಿಗಳು

ಎರಡು ಸರ್ಕಾರ ನೀಡುತ್ತಿರುವ ಈ ಪರಿಹಾರ ಮೊತ್ತ ಸಾಲದು, ಪರಿಹಾರ ಮೊತ್ತವನ್ನು ಇನ್ನೂ ಹೆಚ್ಚಿಸಿ ಮೃತರ ಕುಟುಂಬಕ್ಕೆ ನ್ಯಾಯ ನೀಡಬೇಕು ಹಾಗೂ ಎರಡೂ ರಾಜ್ಯದಿಂದ ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು. ಕೇಂದ್ರ ಸರ್ಕಾರವು ₹1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ವಿಡುದಲೈ ಚಿರತೆಗಳ್ (ವಿಕೆಸಿ) ಸಂಘಟನೆ ಪದಾಧಿಕಾರಿಗಳು ಆಕ್ಸ್‌ಫರ್ಡ್ ಆಸ್ಪತ್ರೆಯ ಶವಗಾರದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.

“ಮೃತರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ಘೋಷಿಸಿದೆ. ಹೆಚ್ಚಿನ ಪರಿಹಾರಕ್ಕೆ ಮೃತರ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಜೊತೆ ಚರ್ಚಿಸಿ ಮತ್ತಷ್ಟು ಪರಿಹಾರ ಕೊಡಿಸುತ್ತೇವೆ” ಎಂದು ಅತ್ತಿಬೆಲೆಯಲ್ಲಿ ತಮಿಳುನಾಡು ಸಚಿವ ಮಾ.ಸುಬ್ರಮಣಿಯನ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...