ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆ ಸಿಐಡಿಗೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಕಾರ್ಮಿಕರು ಸಾವನ್ನಪ್ಪಿದ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ  ಹೇಳಿದರು.

- Advertisement -

ಅಗ್ನಿ ದುರಂತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ, ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಅಗ್ನಿಶಾಮಕ ಡಿಜಿ ಕಮಲ್​​ ಪಂತ್ ಅವರ ಜತೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡದಿಂದ 14 ಜನ ಕಾರ್ಮಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಮೃತರ ಕುಟಂಬಸ್ಥರಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ₹5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದರು.

“ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ದುರಂತ ಶನಿವಾರ ಮಧ್ಯಾಹ್ನ 3.15ರಿಂದ 3.30ರ ನಡುವೆ ನಡೆದಿದೆ. ಅಗ್ನಿ ದುರಂತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗೋಡೌನ್​ನಲ್ಲಿ ಸುರಕ್ಷತಾ ಕ್ರಮ ಇರಲಿಲ್ಲ ಎಂಬ ಮಾಹಿತಿ ಇದೆ. ವಿದ್ಯುತ್​ ತಂತಿ ಅಥವಾ ಯುಪಿಎಸ್​​ನಿಂದ ಈ ದುರಂತ ನಡೆದಿರಬಹುದು. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ” ಎಂದು ತಿಳಿಸಿದರು.

“ಪಟಾಕಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದವರು ಎಲ್ಲರೂ ವಿದ್ಯಾರ್ಥಿಗಳು. ರಜೆ ಇರುವ ಕಾರಣ ದುಡಿಮೆಗಾಗಿ ಪಟಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಅತ್ತಿಬೆಲೆ ಪಟಾಕಿ ದುರಂತ | ಮೃತರ ಕುಟುಂಬಸ್ಥರಿಗೆ ₹3 ಲಕ್ಷ ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ

“ಗೋದಾಮಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ ಎಂದು ತಿಳಿದುಬಂದಿದೆ. ಪಟಾಕಿ ಮಾರಾಟಕ್ಕೆ ಮತ್ತು ಸಂಗ್ರಹಣೆಗೆ ಲೈಸೆನ್ಸ್‌ ಇದೆಯಾ ಎಂಬ ಬಗ್ಗೆ ಪರಿಶೀಲನೆ ಮಾಡಬೇಕು. ಈ ದುರಂತಕ್ಕೆ ಸಂಬಂಧಿಸಿದಂತೆ ಪಟಾಕಿ ಕಂಪನಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್ ಹಾಗೂ ಕಟ್ಟಡದ ಮಾಲೀಕ ಅನಿಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಪರಿಶೀಲನೆ ವೇಳೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್ ಹಾಗೂ ಶಾಸಕ ಎಸ್​.ಟಿ.ಸೋಮಶೇಖರ್​ ಸೇರಿದಂತೆ ಹಲವರು ಇದ್ದರು. ​​

ಐವರ ವಿರುದ್ಧ ಎಫ್‌ಐಆರ್‌ ದಾಖಲು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಸಂಬಂಧಿ ಲೋಕೇಶ್ವರನ್ ಎಂಬುವವರು ಕೊಟ್ಟ ದೂರಿನ ಮೇರೆಗೆ ಐಪಿಸಿ 427, 285, 286, 304, 337, 338 ಎಕ್ಸ್ ಪ್ಲೋಸಿವ್ ಆಕ್ಟ್ ಅಡಿ ಒಟ್ಟು ಐವರ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ಗೋಡೌನ್​ ಮಾಲೀಕ ರಾಮಸ್ವಾಮಿ ರೆಡ್ಡಿ, ನವೀನ್ ರೆಡ್ಡಿ (ರಾಮಸ್ವಾಮಿ ರೆಡ್ಡಿ ಪುತ್ರ), ಮ್ಯಾನೇಜರ್ ಲೋಕೇಶ್, ಕಟ್ಟಡ ಮಾಲೀಕರು ಜಯಮ್ಮ ಹಾಗೂ ಅನಿಲ್ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...