ಔರಾದ್‌ | ಚಿಂತಾಕಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆ ಅನಾವರಣ

Date:

‌ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿಯಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ನೂತನ ಪ್ರತಿಮೆ ಉದ್ಘಾಟನೆ ನೆರವೇರಿತು.

- Advertisement -

ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ ಬಸವಕಲ್ಯಾಣ ಮಹಾಮನೆ ಟ್ರಸ್ಟ್‌ನ ಸಿದ್ಧರಾಮ ಶರಣರು ಬೆಲ್ದಾಳ ಮಾತನಾಡಿ, ʼಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಅಡಿಯಲ್ಲಿ ನಾವೆಲ್ಲರೂ ಬದುಕಬೇಕಿದೆ. ನಮಗೆ ಸಂವಿಧಾನವೇ ಶ್ರೇಷ್ಟ ಗ್ರಂಥವಾಗಿದೆ. ದೇಶದಲ್ಲಿ ಎಲ್ಲಾ ಜಾತಿ,ಧರ್ಮದವರು ಸೌಹಾರ್ದತೆಯಿಂದ ಜೀವಿಸಲು ಸಂವಿಧಾನವೇ ಕಾರಣವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತೀಯರಿಗೆ‌ ನೀಡಿದ ಶಿಕ್ಷಣ, ಸಂಘಟನೆ, ಹೋರಾಟದಂತಹ ಮೂರು ಸೂತ್ರಗಳು ನಾವು ಅನುಸರಿಸಬೇಕು. ನಾವೆಲ್ಲರೂ, ಅದರಲ್ಲೂ ಇಂದಿನ ಯುವ ಸಮೂಹ ಬಾಬಾ ಡಾ.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆʼ ಎಂದು ತಿಳಿಸಿದರು.

ಡಾ. ಅಂಬೇಡ್ಕರ್ ಪ್ರತಿಮೆ ಅನಾವರಣ ಅಂಗವಾಗಿ ತಾಲ್ಲೂಕಿನ ವಿವಿಧ ಗ್ರಾಮಗಳ ಮಹಿಳೆಯರು, ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಇದನ್ನೂ ಓದಿ : ಔರಾದ್‌ | ಸೋಯಾ ಬಣವಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ₹1 ಲಕ್ಷ ಮೌಲ್ಯದ ಸೋಯಾ ನಾಶ

ಕಾರ್ಯಕ್ರಮದಲ್ಲಿ ಆಣದೂರಿನ ಭಂತೆ ಧಮ್ಮಾನಂದ, ಭಂತೆ ಸಂಗ ರಕ್ಷಿತ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಹಿರಿಯ ಕಾಂಗ್ರೆಸ್ ಮುಖಂಡ ಭೀಮಸೇನರಾವ ಸಿಂಧೆ, ಭಾರತೀಯ ಬೌದ್ಧ ಮಹಾಸಭಾದ ರಾಜಪ್ಪ ಗುನಳ್ಳಿ, ಮುಖಂಡ ತರುಣ ಸೂರ್ಯಕಾಂತ ನಾಗಮಾರಪಳ್ಳಿ, ಧನರಾಜ ಮುಸ್ತಾಪೂರ, ಪಿಎಸ್ಐ ಚಂದ್ರಶೇಖರ್, ಶಾಮಸುಂದರ ಖಾನಪೂರ, ಸೂರ್ಯಕಾಂತ ಸಿಂಗೆ ನಂದಾದೀಪ ಬೋರಾಳ, ಸುಭಾಷ ಲಾಧಾ, ಗಣಪತಿ ವಾಸುದೇವ, ಸತೀಶ್ ವಗ್ಗೆ ಸೇರಿದಂತೆ ಚಿಂತಾಕಿ ಗ್ರಾಮಸ್ಥರು, ಮತ್ತಿತರರು ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...