ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ.ಬಿ.ಆರ್. ಅಂಬೇಡ್ಕರ್ ಹೋರಾಟ ಸಮಿತಿಯಿಂದ ಔರಾದ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳ್ಳಂ ಬೆಳಿಗ್ಗೆಯೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಔರಾದ್ ಬಂದ್ ಹಿನ್ನೆಲೆ ಬೆಳಿಗ್ಗೆಯೇ ತೆರೆಯಬೇಕಾದ ವರ್ತಕರು ಅಂಗಡಿ, ಮುಂಗಟ್ಟು ಕಂಡು ಬಂದಿದೆ.
ಹೋರಾಟ ಸಮಿತಿಯ ಪದಾಧಿಕಾರಿಗಳು ಪಟ್ಟಣದ ಸರ್ಕಾರಿ ಆಸ್ಪತ್ರೆ ಬಳಿಯಿಂದ ಎಪಿಎಂಸಿ ವೃತ್ತದ ವರೆಗೆ ಮೆರವಣಿಗೆ ಮೂಲಕ ತೆರಳಿದ್ದರು. ಬಳಿಕ ಟೈರ್ ಗೆ ಬೆಂಕಿ ಹಚ್ಚಿ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಹೋರಾಟ ಸಮಿತಿಯಿಂದ ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಲಾಯಿತು.