ಔರಾದ್‌ | ಸಿಜೆಐ ಮೇಲೆ ಶೂ ಎಸೆತ : ವಕೀಲ ರಾಕೇಶ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ರಾಕೇಶ ಕಿಶೋರ್‌ ಎಂಬ ವಕೀಲರೊಬ್ಬರು ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಔರಾದ್‌ ಪಟ್ಟಣದಲ್ಲಿ ಸೋಮವಾರ ನಾಗರಿಕ ಹೋರಾಟ ಸಮಿತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ನಾಗರಿಕ ಹೋರಾಟ ಸಮಿತಿಯ ಪ್ರಮುಖರು ಸೋಮವಾರ ಪಟ್ಟಣದ ಎಪಿಎಂಸಿ ಸಮೀಪದ ಕನ್ನಡಾಂಬೆ ವೃತ್ತದಿಂದ ವಕೀಲ್‌ ರಾಕೋಶ ಕಿಶೋರ್‌ ವಿರುದ್ಧ ಘೋಷಣೆ ಕೂಗುತ್ತ ಕೈಯಲ್ಲಿ ʼಸಿಜೆಐ ಗವಾಯಿ ಅವರನ್ನು ಅವಮಾನಿಸಿದ ರಾಕೇಶ ಕಿಶೋರ್‌ಗೆ ಗಲ್ಲುಶಿಕ್ಷೆ ವಿಧಿಸಿʼ ʼವಕೀಲ ರಾಕೇಶ ಕಿಶೋರ್‌ ನಾಲಾಯಕನಿಗೆ ಗಡಿಪಾರು ಮಾಡಿʼ, ದೇಶದ ಸಂವಿಧಾನಕ್ಕೆ ಅಪಮಾನ ಮಾಡಿದ ವಕೀಲ ರಾಕೇಶಗೆ ದಿಕ್ಕಾರʼ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಬಸವೇಶ್ವರ ವೃತ್ತದವರೆಗೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ರಾಷ್ಟ್ರಪತಿಗಳ ಹೆಸರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸಿದರು.

ನಾಗರಿಕ ಹೋರಾಟ ಸಮಿತಿ ಮುಖಂಡರು ಮಾತನಾಡಿ, ʼಸಂವಿಧಾನಾತ್ಮಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಜೆಐ ಗವಾಯಿ ಅವರ ಮೇಲೆ ರಾಕೇಶ ಕಿಶೋರ್‌ ಎಂಬ ನಾಲಾಯಕ ವಕೀಲ್ ಶೂ ಎಸೆಯುವುದು ಅತ್ಯಂತ ಹೇಯ ಮತ್ತು ರಾಷ್ಟ್ರವಿರೋಧಿ ಕೃತ್ಯವಾಗಿದೆ. ಇದರಿಂದ ಸಿಜೆಐ ಅವರಿಗೆ ಅಷ್ಟೇ ಅಲ್ಲದೆ ಇಡೀ ದೇಶದ ನಾಗರಿಕರಿಗೆ ಆಗಿರುವ ಅಪಮಾನ. ಕೃತ್ಯ ಎಸಗಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ರಾಷ್ಟ್ರವಿರೋಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕುʼ ಎಂದು ಆಗ್ರಹಿಸಿದರು.

WhatsApp Image 2025 10 13 at 1.33.46 PM
ತಹಸೀಲ್ದಾರ್‌ ಮಹೇಶ ಪಾಟೀಲ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼಭಗವಾನ್ ಬುದ್ಧ ಹಾಗೂ ಡಾ.ಅಂಬೇಡ್ಕರ್ ಅವರ ಅಪ್ಪಟ ಅನುಯಾಯಿ ಹಾಗೂ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದರೂ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆʼ ಎಂದರು.

ಸಿಜೆಐ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕಿವೆ. ಈ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಈ ಘಟನೆಯನ್ನು ಖಂಡಿಸಬೇಕು. ವಕೀಲ ರಾಕೇಶ ವಿರುದ್ಧ ದೇಶದ್ರೋಹ, ಜಾತಿ ನಿಂದನೆ ಪ್ರಕರಣ ದಾಖಲಿಸಿ ಜೀವಾವಧಿ ಶಿಕ್ಷೆ ವಿಧಿಸಬೇಕು. ವಕೀಲರ ಸಂಘದ ಸದಸ್ಯತ್ವ ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ :ಬೀದರ್‌ | ಕನ್ನಡ ಕಾವ್ಯ ಕ್ಷೇತ್ರಕ್ಕೆ ಹೊಸ ಹೊಳಪು ತಂದುಕೊಟ್ಟ ಬೇಂದ್ರೆ : ಅನಂತ ಕೃಷ್ಣ ದೇಶಪಾಂಡೆ

ಪ್ರತಿಭಟನೆಯಲ್ಲಿ ಮುಖಂಡರಾದ ಭೀಮಶೇನ್‌ರಾವ್ ಸಿಂಧೆ, ಶಂಕರರಾವ್ ದೊಡ್ಡಿ,‌ ಶಿವಮೂರ್ತಿ ಬಳತ್‌, ವೈಜಿನಾಥ ಒಡೆಯಾರ್, ಅಶೋಕ ದರಬಾರೆ, ರಾಮಣ್ಣಾ ಒಡೆಯಾರ್, ಸೋಪನರಾವ ಡೊಂಗ್ರೆ, ತಾನಾಜಿ ಮೇತ್ರೆ, ಲಕ್ಷ್ಮಮ ಡೊಂಗ್ರೆ, ಸಂತೋಷ ಸಿಂಧೆ, ಪ್ರಲ್ಹಾದ್ , ಧನರಾಜ್ ಮುಸ್ತಾಪುರ, ಪ್ರಕಾಶ ಜಾಧವ್ ಎಕಂಬಾ, ಉತ್ತಮ ಮಾಂಜ್ರೆಕರ್, ದಯಾಸಾಗರ ಬೆಂಡೆ, ವೈಜಿನಾಥ ಸಿಂಧೆ, ಸುನೀಲ ಮಿತ್ರಾ, ನಾಗನಾಥ ವಾಕೋಡೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...