ಔರಾದ್‌ | ಕುಡಿಯುವ ನೀರಿಗಾಗಿ ಗ್ರಾ.ಪಂ. ಕಚೇರಿ ಎದುರು ವಿದ್ಯಾರ್ಥಿಗಳಿಂದ ಪ್ರತಿಭಟನೆ

Date:

ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್‌ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್‌ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ನಾಗಮಾರಪಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದ್ದು, 1ರಿಂದ 7ನೇ ತರಗತಿವರೆಗೆ ಒಟ್ಟು 127 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಶಾಲಾ ಮಕ್ಕಳಿಗೆ ಕುಡಿಯಲು ಹಾಗೂ ಬಿಸಿಯೂಟ ಸಿದ್ಧಪಡಿಸಲು ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯ ವ್ಯವಸ್ಥೆ, ಕಾಂಪೌಂಡ್‌ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2025 11 06 at 7.04.12 AM
ಪ್ರತಿಭಟನಾ ನಿರತ ವಿದ್ಯಾರ್ಥಿಗಳು,ಗ್ರಾಮಸ್ಥರಿಗೆ ಪಿಡಿಒ ಶರಣಪ್ಪ ಅವರು ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ʼಸರ್ಕಾರಿ ಶಾಲೆಯ ಮಕ್ಕಳಿಗೆ ಕನಿಷ್ಠ ನೀರಿನ ಸೌಕರ್ಯ ಇಲ್ಲದಕ್ಕೆ ನೀರು ಕುಡಿಯಲು ಮನೆಗೆ ಬರಬೇಕಾದ ಪರಿಸ್ಥಿತಿ ಇದೆ. ಇನ್ನು ಸುತ್ತಲಿನ ಬೇರೆ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಹೇಗೆ ಮಾಡಬೇಕು. ಇದರಿಂದ ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗುತ್ತಿದೆ. ಗ್ರಾಮ ಪಂಚಾಯತಿ ಪಿಡಿಒ, ಅಧ್ಯಕ್ಷರು ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಕಚೇರಿ ಮುಂದೆ ಕೂರಿಸಿ ಪ್ರತಿಭಟನೆ ಮಾಡಬೇಕಾದ ಅನಿವಾರ್ಯತೆ ಬಂದಿದೆʼ ಎಂದು ಪೋಷಕರು ಆಕ್ರೋಶ ಹೊರ ಹಾಕಿದರು.

ಇದನ್ನೂ ಓದಿ : ಬೀದರ್ | ₹12 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಈ ಬಗ್ಗೆ ಶಾಲೆಯ ಮುಖ್ಯಗುರು ಸತೀಷ ಅವರನ್ನು ಈದಿನ.ಕಾಮ್‌ ಸಂಪರ್ಕಿಸಿದಾಗ, ʼಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಈ ಬಗ್ಗೆ ಗ್ರಾಮ ಪಂಚಾಯತಿಗೆ ಎರಡು ಸಲ ಮನವಿ ಕೂಡ ಸಲ್ಲಿಸಿದ್ದೇನೆ. ಈ ಹಿಂದೆ ಕೊರೆಸಿದ ಕೊಳವೆ ಬಾವಿ ಕೆಟ್ಟು ನಿಂತಿದೆ. ಹೀಗಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಹೀಗಾಗಿ ನಾವೇ ಹಣ ಕೊಟ್ಟು ನೀರು ಖರೀದಿಸುತ್ತಿದ್ದೇವೆ. ಬುಧವಾರ ಗ್ರಾಮಸ್ಥರೇ ವಿದ್ಯಾರ್ಥಿಗಳನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರು. ತದನಂತರ ಪಿಡಿಒ ಅವರು ಶಾಲೆಗೆ 10 ಕ್ಯಾನ್‌ ನೀರು ಕಳಿಸಿದ್ದಾರೆʼ ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...