ಬೆಳಗಾವಿ | ಟಂಟಂ ಢಿಕ್ಕಿ; ಕಾಲೇಜಿನಿಂದ ಮನೆಗೆ ಹೊರಟಿದ್ದ ವಿದ್ಯಾರ್ಥಿನಿ ದಾರುಣ ಸಾವು

Date:

ಕಾಲೇಜು ಮುಗಿಸಿ ಮನೆಗೆ ನಡೆದುಕೊಂಡು ಮರಳುತ್ತಿದ್ದ ವಿದ್ಯಾರ್ಥಿನಿಗೆ ಟಂಟಂ ವಾಹನವು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ‌ಜಿಲ್ಲೆಯಲ್ಲಿ ನಡೆದಿದೆ.

- Advertisement -

ಕಿತ್ತೂರು-ಬೀಡಿ ರಸ್ತೆಯ ಫಾರೆಸ್ಟ್‌ ನಾಕಾ ಬಳಿ ಬುಧವಾರ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ 3ನೇ ಸೆಮಿಸ್ಟರ್‌ ಓದುತ್ತಿದ್ದ ಕಾವೇರಿ ಕಾಜಗಾರ (21) ಮೃತ ವಿದ್ಯಾರ್ಥಿನಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೃತ ವಿದ್ಯಾರ್ಥಿನಿ ಕಿತ್ತೂರು ‌ಹೊರವಲಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ‌ವ್ಯಾಸಂಗ ಮಾಡುತ್ತಿದ್ದಳು. ತರಗತಿ ಮುಗಿಸಿ ಎಂದಿನಂತೆ ಮನೆ ಕಡೆಗೆ ಕಾಲ್ನಡಿಗೆಯಲ್ಲಿ ಹೋಗುವಾಗ ಏಕಾಏಕಿ ಬಂದ ಟಂಟಂ ವಾಹನ ವಿದ್ಯಾರ್ಥಿನಿ ಮೇಲೆಯೇ ಹರಿಯಿತು. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಗೆ ಸ್ಥಳೀಯರು ಸಮುದಾಯ ಆರೋಗ್ಯ ‌ಕೇಂದ್ರಕ್ಕೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾವೇರಿ ಆಸ್ಪತ್ರೆಗೆ ‌ದಾಖಲಿಸುವ ಮುನ್ನವೇ ‌ಮೃತಪಟ್ಟಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದರು.

ಅಪಘಾತಕ್ಕೆ ಕಾರಣನಾದ ಟಂಟಂನ ಚಾಲಕ ದೇಗಾಂವ ಗ್ರಾಮದ ಅನಿಲ್ ಚಿವಟಗುಂಡಿ ಎಂಬುವವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯ ಸಹಪಾಠಿಗಳು ಆಸ್ಪತ್ರೆಗೆ ಧಾವಿಸಿ, ವಿದ್ಯಾರ್ಥಿನಿ ಸಾವಿಗೆ ಕಣ್ಣಿರಾದರು. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೂದ್ರ ಸ್ವಾಮಿ ಕೇಸರಿ ಸ್ವಾಮಿಯಾಗುವುದು ತಪ್ಪೇ?

ಈ ಘಟನೆ ಕಿತ್ತೂರು ‌ಪೊಲೀಸ್ ಠಾಣೆ ‌ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...