ಹೂವಿನ ಹಡಗಲಿ | ದಲ್ಲಾಳಿಗಳ ಹಾವಳಿ ತಪ್ಪಿಸಿ, ಬೆಳೆಗಳನ್ನು ಎಪಿಎಂಸಿ ಮೂಲಕ ಖರೀದಿಸಲು ವ್ಯವಸ್ಥೆ ಮಾಡಿ: ರೈತರ ಪಟ್ಟು

Date:

Advertisements

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ ನಾಯಕ ಅವರಿಗೆ ರೈತರು ಮನವಿ ಸಲ್ಲಿಸಿದರು.

ರೈತರ ಫಸಲನ್ನು ವ್ಯಾಪಾರಸ್ಥರು ದಲ್ಲಾಳಿಗಳ ಬಳಿ ಹೋಗಿ ವ್ಯಾಪಾರ ಮಾಡುತ್ತಿದ್ದು, ಇದರಲ್ಲಿ ತುಂಬಾ ಮೋಸ ಮತ್ತು ಅನ್ಯಾಯ ಆಗುತ್ತಿದೆ. ದಲ್ಲಾಳಿಗಳ ಹಾವಳಿಯನ್ನು ತಡೆಯಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿ ಕ್ವಿಂಟಾಲ್‌ಗೆ 5 ಕೆ.ಜಿ ಫಸಲು ಕಟ್ ಮಾಡುತ್ತಿದ್ದು, ದಲ್ಲಾಳಿ ಶೇ.2ನ್ನು ಪಡೆಯುತ್ತಿದ್ದಾರೆ. ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತದೆ. ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷರು ಸದಸ್ಯರು ಮತ್ತು ಕಾರ್ಯದರ್ಶಿಗಳ ಸಭೆ ಕರೆದು ರೈತರ ಮತ್ತು ವ್ಯಾಪಾರಸ್ಥರ ನಡುವೆ ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕು ಎಂದರು.

Advertisements

ರೈತರು ಬೆಳೆದ ಪಸಲನ್ನು ಎಪಿಎಂಸಿಗೆ ತಂದು ಯಾವುದೇ ಕಟಾವು ಮತ್ತು ಕಮಿಷನ್ ಇಲ್ಲದೆ ಮಾರಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ವ್ಯಾಪಾರಸ್ಥರು ಹಳ್ಳಿಯಲ್ಲಿ ವ್ಯವಹಾರ ಮಾಡಿದರೆ ಯಾವುದೇ ಕಟಾವು ಕಮಿಷನ್ ಇಲ್ಲದೆ ವ್ಯವಹಾರಕ್ಕೆ ಮುಂದಾಗಬೇಕು. ತೂಕದಲ್ಲಿ ವ್ಯಾಪಾರಸ್ಥರಿಂದ ವ್ಯತ್ಯಾಸ ಕಂಡು ಬಂದರೆ ಅಂಥವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಹಾಗೂ ಲೆಸೆನ್ಸ್ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಬೇರೆ ಬೇರೆ ತಾಲೂಕು ಮತ್ತು ಜಿಲ್ಲೆಗಳಿಂದ ವ್ಯಾಪಾರಸ್ಥರು ಹೂವಿನ ಹಡಗಲಿ ಎಪಿಎಂಸಿಗೆ ಬಂದು ವ್ಯಾಪಾರ ಮಾಡಲು ಅನುಕೂಲವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ? ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಸಿದ್ದಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶಿವರಾಜ್ ಹೊಳಗುಂದಿ, ಜಿಲ್ಲಾಧ್ಯಕ್ಷರಾದ ಸೋಮಶೇಖರಪ್ಪ ನಂದಿಹಳ್ಳಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಚನ್ನವೀರಮ್ಮ, ತಾಲೂಕು ಉಪಾಧ್ಯಕ್ಷರಾದ ಶಂಕರ್ ಗೌಡ್ರು, ಮೈಲಾರ ತಾಲೂಕು ಸಂಚಾಲಕ ದುರ್ಗಪ್ಪ, ರೈತ ಮುಖಂಡರಾದ ಶಿವ ನಾಗಪ್ಪ, ಗಿರೀಶ್ ಕೆಕೆ, ತಾಂಡ ಮಂಜು ನಾಯಕ್ ದಾಸರಳ್ಳಿ, ತಾಂಡ ಶರಣಪ್ಪ ಅಲ್ಲಿಪುರ ಇನ್ನೂ ಹಲವರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X