ಬೆಂ. ಗ್ರಾಮಾಂತರ | ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ

Date:

ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗಳು ನಡೆಯುತ್ತಿವೆ. ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶಾಲಾ, ಕಾಲೇಜುಗಳು, ಪಂಚಾಯತಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಹೇಳಿದರು.

- Advertisement -

ದೇವನಹಳ್ಳಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಲಾಗಿದೆ. ಅಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಮಕ್ಕಳ ರಕ್ಷಣೆ ಸಾಧ್ಯ” ಎಂದರು.

“ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

“ಮಕ್ಕಳ ಭಿಕ್ಷಾಟನೆ, ಬಾಲಕಾರ್ಮಿಕ, ಶಿಕ್ಷಣ ವಂಚಿತ ಮಕ್ಕಳು, ಲೈಂಗಿಕ ದೌರ್ಜನ್ಯ, ಕಾಣೆಯಾದ ಮಕ್ಕಳು ಮುಂತಾದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು” ಎಂದು ಸಲಹೆ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಲ್ಲಾಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮು, ವಿಶ್ವನಾಥಪುರ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಜಿಲ್ಲೆ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...