ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

Date:

ಕೋಲಾರ: ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶದ ಕ್ಷೌರಿಕ ಮನೆ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ಎಂ.ಎಸ್ ಮುತ್ತುರಾಜ್ ತಿಳಿಸಿದರು

- Advertisement -

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನ ದೊಡ್ಡಹಸಾಳ ಗ್ರಾಮದ ಎಂ.ರಾಮಮೂರ್ತಿ ಮನೆಯಲ್ಲಿ ಪ್ರಾರಂಭವಾಗಲಿದ್ದು ಗುರುವಾರ ಶಿಲ್ಲಂಗೆರೆ ಶುಕ್ರವಾರ ಯಲವಾರ ಗ್ರಾಮದಲ್ಲಿ ವಾಸ್ತವ್ಯ ಮಾಡಲಾಗುತ್ತದೆ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಸವಿತಾ ಸಮಾಜದ ನಿಗಮದಿಂದ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು 50 ಲಕ್ಷ ಪೋತ್ಸಾಹಧನ ಕನಿಷ್ಠ ಎರಡು ಎಕರೆ ಜಮೀನು ಇದ್ದರೆ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆಬಾವಿಗೆ ಅವಕಾಶ ನೀಡಲಾಗುತ್ತದೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ಜೊತೆಗೆ ಸ್ವಾವಲಂಬಿ ಸಾರಥಿ ಇತ್ಯಾದಿ ಯೋಜನೆಗಳು ಇದ್ದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ನಿಗಮಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 18 ಕೋಟಿ ಅನುದಾನ ನೀಡಲಾಗಿದೆ ಮುಂದೆ ಹೆಚ್ಚಿನ ಬೇಡಿಕೆ ಇಡಲಾಗುತ್ತದೆ ನಮಗೆ ಜಾತಿಯ ಶಕ್ತಿ ಇಲ್ಲ ಜಾತಿಯ ಹಾಗೂ ವೃತ್ತಿಯ ಬಗ್ಗೆ ಅವಹೇಳನಕಾರಿಯ ಪದ ಬಳಸುತ್ತುರುವುದು ಬೇಸರ ತರಿಸಿದೆ ಮುಂದೆ ಇದಕ್ಕೆ ಕಾನೂನು ತರಲು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದರು‌.

ಸವಿತಾ ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಎಸ್.ಮಂಜುನಾಥ್ ಮಾತನಾಡಿ ನಿಗಮ ಅಧ್ಯಕ್ಷ ಮುತ್ತುರಾಜ್ ಕ್ಷೌರಿಕರ ಮನೆಯಲ್ಲಿ ವಾಸ್ತವ್ಯ ಹೂಡಲಿದ್ದು ಇದು ಹೊಸ ಪ್ರಯೋಗವಾಗಿದೆ ಸಮುದಾಯದ ಬಗ್ಗೆ ಸಮಾಜದಲ್ಲಿ ಕಾಡುತ್ತಿರುವ ಕೀಳರಿಮೆ ಹೋಗಲಾಡಿಸಲು ಆತ್ಮವಿಶ್ವಾಸ ತುಂಬಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಕೋಲಾರದಿಂದ ಪ್ರಾರಂಭವಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ನಡೆಯಲಿದೆ ಎಂದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಓಬಿಸಿ ಮಂಜುನಾಥ್ ಮಾತನಾಡಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸವಿತಾ‌ ಸಮಾಜ ಬೆಸ್ತರು ಹಾಗೂ ಮಡಿವಾಳ ಸಮುದಾಯವನ್ನು ಎಸ್ಸಿಗೆ ಸೇರಿಸಲು ಮನವಿ ‌ಮಾಡಿದ್ದೇವೆ ಮುಂಬರುವ ಬಜೆಟ್ ನಲ್ಲಿ ಸಮಾಜದ ಏಳಿಗೆಗಾಗಿ ಕನಿಷ್ಠ 100 ಕೋಟಿ ವಿಶೇಷ ಅನುದಾನಕ್ಕೆ ಮನವಿ ಮಾಡಿದ್ದೇವೆ ಸಮಾಜದಲ್ಲಿನ ಕಟ್ಟಕಡೆಯ ‌ಬಡವರನ್ನು ಗುರುತಿಸಿ ಸೌಲಭ್ಯವನ್ನು ಸಿಗುವಂತೆ ಮಾಡಬೇಕಾಗಿದೆ ಎಂದರು.

ಇದನ್ನು ಓದಿದ್ದೀರಾ..? ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಿದ ವಿಜಯಕುಮಾರ್ ಗೆ ಕಾಂಗ್ರೆಸ್ ಮುಖಂಡರಿಂದ ವಾಗ್ದಾಳಿ

ಈ ಪತ್ರಿಕಾಗೋಷ್ಠಿಯಲ್ಲಿ ಸವಿತಾ ಸಮಾಜದ ಮುಖಂಡರಾದ ಶಿವಕುಮಾರ್, ಕೆಂಪರಾಜು, ದೀಪು, ಕೋಟೆ ರಾಜೇಶ್, ಗುರು ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....