ಶಿವಮೊಗ್ಗ | ಯಡಿಯೂರಪ್ಪನವರ ಕಣ್ಣೀರಧಾರೆಗೆ ಮಕ್ಕಳೇ ಕಾರಣ : ಆಯನೂರ್  ಮಂಜುನಾಥ್

Date:

ಶಿವಮೊಗ್ಗ ಜಿಲ್ಲೆಯ ಸಂಸದ  ಬಿ.ವೈ ರಾಘವೇಂದ್ರ ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆ ಲಯೇ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದೆ. ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪ ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ ರಾಜೀನಾಮೆ ನೀಡಬೇಕಾಯಿತು. ಅವರು ಕಣ್ಣೀರಧಾರೆಗೆ ಅವರ ಮಕ್ಕಳೇ ಕಾರಣ ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್  ಹೇಳಿದ್ದಾರೆ.

- Advertisement -

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ಯಾರಿಂದ ಎನ್ನುವ ಬಗ್ಗೆ ಬಹಿರಂಗ ಚರ್ಚೆ ಬನ್ನಿ ಎಂದು ಪಂಥಾಹ್ವಾನ ನೀಡಿದರಲ್ಲದೆ, ಬಿಜೆಪಿ ರಾಘವೇಂದ್ರ, ವಿಜಯೇಂದ್ರ ಬಂದ ನಂತರ ಭ್ರಷ್ಟಾಚಾರ ಜನತ ಪಕ್ಷವಾಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಿ.ವೈ. ರಾಘವೇಂದ್ರ ಅವರೇ ನೀವು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾವಿರಾರು ಕೋಟಿ ರೂ.ಗಳ ಬೇನಾಮಿ ಆಸ್ತಿಗಳನ್ನು ಟ್ರಸ್ಟ್‌ಗಳ ಹೆಸರಿನಲ್ಲಿ ರಿಜಿಸ್ಟ್ರಾರ್ ಮಾಡಿಕೊಂಡಿದ್ದೀರಾ. ಹಣದ ಮೂಲವನ್ನು ತಾವು ಪ್ರಕಟ ಮಾಡಬಹುದಾ? ಭ್ರಷ್ಟಾಚಾರದ ಆರೋಪದ ಮೇಲೆ ಒಬ್ಬ ಹೋರಾಟಗಾರನ ಅಂತ್ಯ ಆಗಿದೆ. ನಮ್ಮ ಜಿಲ್ಲೆಯ ರಾಜಕಾರಣಕ್ಕೆ ಕಪ್ಪುಚುಕ್ಕೆ ತರುವಂತೆ ಯಡಿಯೂರಪ್ಪ ಅವರನ್ನು ಬಲಿತೆಗೆದುಕೊಂಡಿದ್ದು ಬಿಜೆಪಿಯ ಭ್ರಷ್ಟಾಚಾರವೇ ಹೊರತು, ಬೇರಾವ ಜನಾಂದೋಲನಗಳಲ್ಲ. ತಮ್ಮ ಮತ್ತು ಕುಟುಂಬದ ಭ್ರ್ರಷ್ಟಾಚಾರದ ಕಾರಣದಿಂದ ಹೈಕಮಾಂಡ್ ಅನಿವಾರ್ಯವಾಗಿ ಅಧಿಕಾರದಿಂದ ಕೆಳಗಿಳಿಸಬೇಕಾದ ಪರಿಸ್ಥಿತಿ ನಿರ್ಮಾಣ ಮಾಡಿದವರ ಬಾಯಲ್ಲಿ ಭ್ರಷ್ಟಾಚಾರದ ವಿರುದ್ದ ಮಾತು ಬಂದಿರುವುದನ್ನು ಸ್ವಾಗತಿಸುತ್ತೇನೆ ಎಂದು ಲೇವಡಿ ಮಾಡಿದರು.

ಮಹಾಸಭಾ ಸಭೆ ಗೊಂದಲ:
ಜಾತಿಗಣತಿ ಕುರಿತಂತೆ ಆಖಿಲ ಭಾರತ ವೀರಶೈವ -ಲಿಂಗಾಯಿತ ಮಹಾಸಭಾ ಕರೆದಿರುವ ಸಭೆ ಗೊಂದಲದಿಂದ ಕೂಡಿದೆ ಎಂದು ಆಯನೂರು ಮಂಜು ನಾಥ್ ಪ್ರತಿಕ್ರಿಯಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ಮಹಾಸಭಾದ ಅಧ್ಯಕ್ಷರಾಗಿ ಮತ್ತು ಕಾಂಗ್ರೆಸ್ ನ ಮುಖಂಡರಾಗಿಯೂ ಇದ್ದಾರೆ. ಅವರು ಒಂದು ಸ್ಪಷ್ಟ ನಿಲುವು ಹೊಂದಬೇಕು. ಜಾತಿಗಣತಿ ಆಗ ಬೇಕೆಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದಕ್ಕೆ ಎಲ್ಲರೂ ಬದ್ದರಾಗಿರಬೇಕು. ಜಾತಿಗಣತಿ ಬಗ್ಗೆ ವೀರಶೈವ- ಲಿಂಗಾಯತ ಮಹಾಸಭೆ ಕರೆದಿರುವ ಸಭೆಯ ಹಿಂದೆ ಬಿಜೆಪಿಯ ಕೈವಾಡವಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ಇದಾಗಿದೆ ಎಂದರು.

ವೀರಶೈವ-ಲಿಂಗಾಯಿತ ಮಹಾಸಭಾ ನಾವು ಹಿಂದೂಗಳಲ್ಲ. ನಮ್ಮದು ಲಿಂಗಾಯಿತ ಧರ್ಮ ಎಂದು ಈಗಾಗಲೆ ನಿರ್ಧಾರ ತೆಗೆದುಕೊಂಡಿದೆ. ನಾಳೆ ನಡೆಯಲಿರುವ ವೀರಶೈವ-ಲಿಂಗಾಯಿತ ಮಹಾಸಭಾದ ಸಭೆಗೆ ಹೋಗುವ ಮುನ್ನ ಯಡಿಯೂರಪ್ಪ ಮತ್ತವರ ಮಕ್ಕಳು ಜಾತಿ ಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ನಲ್ಲಿ ವೀರಶೈವ ಲಿಂಗಾಯಿತ ಅಂತರೆ ಬರೆಸುತ್ತೀರೋ? ಅಥವಾ ಬಿಜೆಪಿಯ ಹಿಂದೂ ಎಂದು ಬರೆಸುತ್ತೀರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಜಾತಿಯ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾ ಬಂದಿರುವ ಯಡಿಯೂರಪ್ಪ ಕುಟುಂಬ ಎರಡು ದೋಣಿಯ ಮೇಲೆ ಕಾಲಿಟ್ಟು ಸಾಗುತ್ತಿದೆ. ಅವರು ಇದಕ್ಕೆ ಉತ್ತರ ಕೊಡಬೇಕು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ  ಬೇಳೂರು ಗೋಪಾಲಕೃಷ್ಣ, ಶಂಕರಘಟ್ಟ ರಮೇಶ್, ಶಿ.ಜು. ಪಾಶಾ, ಜಿ. ಪದ್ಮನಾಭ್, ಸೋಮಶೇಖರ್, ಬಾಲಾಜಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...