ಗದಗ | ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

Advertisements

ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಜನಸಾಮಾನ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ನೀಡುವ ಮಹತ್ವದ ಯೋಜನೆಯಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಜನಸಾಮಾನ್ಯರು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಬಿ.ಪಿ.ಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ ಹಾಗೂ ಎ.ಪಿ.ಎಲ್. ಪಡಿತರ ಕುಟುಂಬದ ಪ್ರತಿ ಸದಸ್ಯರಿಗೆ 1.5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ಸೌಲಭ್ಯ ದೊರಕಲಿದೆ” ಎಂದರು.

“ಜಿಲ್ಲೆಯಲ್ಲಿ 9,41,247 ನಿಗದಿಪಡಿಸಿದ ಫಲಾನುಭವಿಗಳಿದ್ದು ಈ ಪೈಕಿ 3,42,290 ಫಲಾನುಭವಿಗಳು ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡು ಕಾರ್ಡ ಪಡೆಯುವ ಮೂಲಕ ಶೇ 36 ರಷ್ಟು ಪ್ರಗತಿಯಾಗಿದೆ. ಈ ಯೋಜನೆಯ ಪ್ರಯೋಜನವನ್ನು ಜನಸಾಮಾನ್ಯರಿಗೆ ತಿಳಿಸಿ ಜಾಗೃತಿ ಮೂಡಿಸುವ ಮೂಲಕ ಅರ್ಹ ಎಲ್ಲ ಫಲಾನುಭವಿಗಳು ನಿಗದಿತ ದಾಖಲೆ ನೀಡಿ ಕಾರ್ಡ ಪಡೆದು ಉಚಿತ ಆರೋಗ್ಯ ಸೌಲಭ್ಯ ತಮ್ಮದಾಗಿಸಿಕೊಳ್ಳಬೇಕು. ಸಂಬಂಧಿತ ಇಲಾಖೆ ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

Advertisements

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ, “ನಗದುರಹಿತ ಚಿಕಿತ್ಸೆ ಪಡೆಯುವ ಯೋಜನೆ ಈ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಈ ಯೋಜನೆಯಡಿ 1,650 ವಿವಿಧ ಹಂತದ ಚಿಕಿತ್ಸೆ ನಿಗದಿಪಡಿಸಲಾಗಿದೆ. ಸರ್ಕಾರಿ ಆಸ್ಪತ್ರೆ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಆರೋಗ್ಯ ಕಾರ್ಡ ಪಡೆಯಲು ಹತ್ತಿರದ ಕರ್ನಾಟಕ ಒನ್ ಸಿಎಸ್‍ಸಿ ಸೆಂಟರ್‍ಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ ಪಡೆಯಬಹುದು ಅಥವಾ ಫಲಾನುಭವಿಗಳೇ ನೇರವಾಗಿ ಆಯುಷ್ಮಾನ್ ಮೊಬೈಲ್ ಆಪ್ ಮೂಲಕ ನೊಂದಾಯಿಸಿ ಕಾರ್ಡ್ ಪಡೆಯಬಹುದಾಗಿದೆ” ಎಂದರು.

ಆಯುಷ್ಮಾನ್ ಆಪ್: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯ ಹೊಂದಲು ಫಲಾನುಭವಿಗಳು ಮೊದಲು ಕಾರ್ಡ ಪಡೆಯಬೇಕು. ಆಯುಷ್ಮಾನ್ ಆಪ್ ಪ್ಲೇಸ್ಟೋರ್ ನಿಂದ ಡೌನ್‍ಲೋಡ್ ಮಾಡಿಕೊಂಡು ಆಧಾರ ಲಿಂಕ್ ಇರುವ ಮೊಬೈಲ್ ಸಂಖ್ಯೆ ಬಳಸಿ ನೊಂದಾಯಿಸಿಕೊಳ್ಳಬಹುದಾಗಿದೆ.

ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜು ಪ್ರಾಂಶುಪಾಲರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X