ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

Date:

ಬಹುವರ್ಷಗಳ ಬೇಡಿಕೆಯಾಗಿದ್ದ ಅನಧಿಕೃತ ಆಸ್ತಿಗಳಿಗೆ ಖಾತೆ ನೀಡುವ ಕಾನೂನಾತ್ಮಕ ಬಿ-ಖಾತೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ನಗರದ 7ನೇ ವಾರ್ಡಿನಲ್ಲಿ ಗುರುವಾರ ಸಾರ್ವಜನಿಕರ ಅರ್ಜಿ ಸ್ವೀಕರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

- Advertisement -

ಅರ್ಜಿ ಸ್ವೀಕರಿಸಿ ಬಳಿಕ ಮಾತನಾಡಿದ ಶಾಸಕರು, ಭ್ರಷ್ಟಾಚಾರ ಮತ್ತು ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಬೇಕೆಂಬ ಸದುದ್ದೇಶದಿಂದ ನಗರದ ಪ್ರತಿ ವಾರ್ಡ್‌ಗಳಲ್ಲೂ ಕೌಂಟರ್ ತೆರೆಯಲಾಗಿದೆ. ನಾಗರಿಕರು ಯಾರಿಗೂ ಹಣ ನೀಡುವ ಅಗತ್ಯವಿಲ್ಲ. ನಾಗರಿಕರು ತಮ್ಮ ಬಳಿಯಿರುವ ಸ್ವತ್ತಿನ ದಾಖಲೆಗಳನ್ನು ಒದಗಿಸಿ ಕಾನೂನಾತ್ಮಕವಾದ ಬಿ-ಖಾತೆ ದಾಖಲೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಗರ ನಿವಾಸಿಗಳ ಹತ್ತಾರು ವರ್ಷಗಳ ಬೇಡಿಕೆಯಾಗಿದ್ದ ಖಾತೆ ಕನಸಿಗೆ ರಾಜ್ಯ ಸರಕಾರ ಹಸಿರು ನಿಶಾನೆ ತೋರಿದ್ದು, ಸಾರ್ವಜನಿಕರು ಅಭಿಯಾನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಯಾರಾದರೂ ಬಡವರು ಕಂದಾಯ ಕಟ್ಟಲು ಸಾಧ್ಯವಾಗದಿದ್ದಲ್ಲಿ ಅಂತವರಿಗೆ ಆಯಾ ವಾರ್ಡಿನ ಸದಸ್ಯರೇ ಕಂದಾಯ ಕಟ್ಟುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಖಾತೆ ಅಭಿಯಾನಕ್ಕೆ ಮೂರು ಪಕ್ಷದವರು ಸಹಕರಿಸಿದ್ದು, ಎಲ್ಲರಿಗೂ ಅಭಿನಂದನೆಗಳು. ಅಭಿಯಾನ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ದಲ್ಲಾಳಿಗಳಿಗೆ ಬ್ರೇಕ್ ಹಾಕೋಣ ಎಂದರು.

ಡಿವೈನ್‌ ಸಿಟಿ ಬಡಾವಣೆ ಮುಖಂಡರ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅಲ್ಲಿನ ಅಧಿಕೃತ ಆಸ್ತಿಗಳಿಗೆ ಖಾತೆ ಮಾಡಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೊದಲ ದಿನ 716 ಅರ್ಜಿಗಳು ಸ್ವೀಕಾರ :
ಬಿ-ಖಾತೆ ಅಭಿಯಾನದ ಮೊದಲ ದಿನವಾದ ಇಂದು ನಗರದ 31 ವಾರ್ಡ್‌ಗಳ ಪೈಕಿ ಒಟ್ಟು 716 ಅರ್ಜಿಗಳು ಸ್ವೀಕಾರವಾಗಿದ್ದು, ಫೆ.22ರವರೆಗೆ ಅಭಿಯಾನ ನಡೆಯಲಿದೆ. ಅವಶ್ಯಕತೆಗೆ ಅನುಗುಣವಾಗಿ ಅಭಿಯಾನವನ್ನು ಮುಂದುವರಿಸಲಾಗುವುದು ಎಂದು ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ರೈಲಿನಲ್ಲಿ ಗಾಂಜಾ ತಂದಿದ್ದ ಕುಟುಂಬ ಬಂಧನ; 17.5ಲಕ್ಷ ಮೌಲ್ಯದ ಗಾಂಜಾ ವಶ

ಈ ವೇಳೆ ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಹಾಗೂ ಇತರೆ ಕಾಂಗ್ರೆಸ್‌ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...