ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

Date:

ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2024ರ ಫೆಬ್ರವರಿ 16 ರಂದು ಉಪಚುನಾವಣೆ ನಡೆಯಲಿದೆ. ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟವಾಗಿದೆ.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಟೌನ್, ಮಧುರೆ ಹೋಬಳಿ, ತೂಬಗೆರೆ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬಳ್ಳಾಪುರ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ ಪ್ರಕಟಣೆಯಲ್ಲಿ” ತಿಳಿಸಿದ್ದಾರೆ.

“ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ, ಸಾಸಲು ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೊಡ್ಡಬೆಳವಂಗಲ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೇವನಹಳ್ಳಿ ತಾಲೂಕಿನ ಕಸಬಾ ಟೌನ್, ಚನ್ನರಾಯಪಟ್ಟಣ ಹೋಬಳಿ, ಕುಂದಾಣ ಹೋಬಳಿ, ವಿಜಯಪುರ ಹೋಬಳಿ ವ್ಯಾಪ್ತಿಯ ಶಿಕ್ಷಕ ಮತದಾರರು ದೇವನಹಳ್ಳಿ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ಹೇಳಿದ್ದಾರೆ.

“ಹೊಸಕೋಟೆ ತಾಲೂಕಿನ ಕಸಬಾ ಟೌನ್, ಅನುಗೊಂಡನಹಳ್ಳಿ, ಜಡಿಗೇನಹಳ್ಳಿ, ನಂದಗುಡಿ, ಸೂಲಿಬೆಲೆ ವ್ಯಾಪ್ತಿಯ ಶಿಕ್ಷಕ ಮತದಾರರು ಹೊಸಕೋಟೆ ತಾಲೂಕು ಕಚೇರಿಯ ಮಿನಿ ವಿಧಾನಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದರು.

“ನೆಲಮಂಗಲ ತಾಲೂಕಿನ ಕಸಬಾ ವ್ಯಾಪ್ತಿಯ ಶಿಕ್ಷಕ ಮತದಾರರು ನೆಲಮಂಗಲ ತಾಲೂಕು ಕಚೇರಿಯ ಮಿನಿ ವಿಧಾನ ಸೌಧದ ನ್ಯಾಯಾಲಯ ಸಭಾಂಗಣದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಫೆ.12ರಿಂದ 23ರವರೆಗೆ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಸೋಂಪುರ, ತ್ಯಾಮಗೊಂಡ್ಲು ವ್ಯಾಪ್ತಿಯ ಶಿಕ್ಷಕ ಮತದಾರರು ಸೋಂಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-2ರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಎನ್ ಶಿವಶಂಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...