ಬಾಬು ಜಗಜೀವನರಾಂ ದೇಶದ ಸಮಾನತೆಗಾಗಿ ದುಡಿದಿದ್ದಾರೆ: ಊರಬಾಗಿಲು ಶ್ರೀನಿವಾಸ್

Date:

ಕೋಲಾರ: ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಇಬ್ಬರು ದೇಶದ ಎರಡು ಕಣ್ಣುಗಳು ಇದ್ದಂತೆ ಅವರು ಸಮಾಜದಲ್ಲಿ ಜಾತಿ ಬೇಧ ಮರೆತು ಸಮಾನತೆಗಾಗಿ ಶ್ರಮಿಸಿದ್ದ ಶ್ರೇಷ್ಠ ರಾಜಕೀಯ ಪಟುಗಳು ಇವತ್ತು ಜಗಜೀವನರಾಂ ಅವರ ಆದರ್ಶಗಳು ನಮಗೆಲ್ಲ ಮಾದರಿ ಎಂದು ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ತಿಳಿಸಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಭಾನುವಾರ ನಡೆದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅವರಿಗೆ ಸಿಕ್ಕಂತಹ ಅಧಿಕಾರವನ್ನು ದೇಶದ ಅಭಿವೃದ್ಧಿ ಮತ್ತು ಸಮಸ್ಯೆಗಳ ನಿವಾರಣೆಗಾಗಿ ಅವಿರತವಾಗಿ ಶ್ರಮಿಸಿದ್ದ ಮಹಾನ್ ನಾಯಕರಾಗಿದ್ದರು ಇವತ್ತು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಜಗಜೀವನರಾಂ ಹಾದಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸೀತಿಹೊಸೂರು ಮುರಳಿಗೌಡ ಮಾತನಾಡಿ, ಸಮಾಜದಲ್ಲಿ ಅಸ್ಪೃಶ್ಯತೆ, ಬಡತನ, ನಿರುದ್ಯೋಗ ಆಹಾರದ ಕೊರತೆಯಂತಹ ಸಮಸ್ಯೆಗಳು ನಿವಾರಿಸುವಲ್ಲಿ ಬಾಬೂಜಿ ಅವರ ಕೊಡುಗೆ ಅಪಾರವಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ ಜಗಜೀವನರಾಂ ಅವರು ಸತತ ಮೂವತ್ತು ವರ್ಷಗಳು ಸಂಪುಟ ದರ್ಜೆ ಸಚಿವರಾಗಿ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣದಿಂದ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ ಎಂಬುದನ್ನು ತೋರಿಸಿದ್ದಾರೆ ಎಂದರು.

ಇವತ್ತು ಜಿಲ್ಲೆಯಲ್ಲಿ ಭಯದಿಂದ ಇರಬೇಕಾಗಿದೆ ಅದು ಬಿಜೆಪಿ ಮತ್ತು ಜೆಡಿಎಸ್ ನವರಿಂದ ಅಲ್ಲ ಕಾಂಗ್ರೆಸ್ ಪಕ್ಷದಿಂದ ಇವತ್ತು ನಮಗೆಲ್ಲ ಅಧಿಕಾರ ಇಲ್ಲ ಪಕ್ಷ ಸಂಘಟನೆ ಮಾಡತ್ತಿದ್ದೇವೆ ಆದರೂ ಜವಾಬ್ದಾರಿಯಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂಎಲ್ಎ ಮತ್ತು ಎಂಎಲ್ಸಿ ಜೊತೆಗೆ ಇರೋರಿಗೆ ಮಾತ್ರ ಅಧಿಕಾರ ಸಿಕ್ಕಿದೆ ಬದಲಾವಣೆ ಜಗದ ನಿಯಮ ಮುಂದೆ ಬದಲಾಗುತ್ತದೆ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರನ್ನು ಹೊಡೆದರು ಕಾಂಗ್ರೆಸ್ ಕಟ್ಟುವ ಕೆಲಸ ಮಾಡೋಣ ಕಾರ್ಯಕರ್ತರಿಗೆ ಅಧಿಕಾರ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಸಾದ್ ಬಾಬು ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಬೆಳೆದು ಇವತ್ತು ಎಲ್ಲಾ ವಿಭಾಗದಲ್ಲಿ ಫಲಾನುಭವಿಗಳು ಕಾಂಗ್ರೆಸ್ ಬಗ್ಗೆ ಗೌರವ ಅಭಿಮಾನ ಇದ್ದಿದ್ದರೆ ಕಾಂಗ್ರೆಸ್ ಕಛೇರಿಗೆ ಬಂದು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು ಅವರು ಬೆಳೆದ ಮೇಲೆ ಕಾಂಗ್ರೆಸ್ ಕಛೇರಿಯನ್ನು ನಿರ್ಲಕ್ಷ್ಯ ಮಾಡಿಕೊಂಡು ಹೋಗುತ್ತಿದ್ದಾರೆ ಇಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಪಕ್ಷ ವಿರೋಧಿಗಳಿಗೆ ಅಧಿಕಾರ ಸಿಕ್ಕಿದೆ ಇದು ಸರಿಯಲ್ಲ ಇದು ಸರಿಪಡಿಸಿಕೊಂಡು ಹೋಗಬೇಕು ಎಂದರು.

ಇದನ್ನು ಓದಿದ್ದೀರಾ..? ದಾವಣಗೆರೆ ಉಪ ಚುನಾವಣಾ ಪ್ರಚಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಭಾಗಿ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಾಮಾಲಿನಿ, ನಗರಸಭೆ ಮಾಜಿ ಸದಸ್ಯರಾದ ಮುರಳಿಗೌಡ, ಸಿ.ಸೋಮಶೇಖರ್, ಮುಖಂಡರಾದ ಕೆ.ಆರ್ ತ್ಯಾಗರಾಜ್, ವೆಂಕಟಪತಿ, ಓಬಿಸಿ ಮಂಜುನಾಥ್, ಪ್ಯಾರೇಜಾನ್, ಮಾಲಾ, ಮಂಜುಳಾ, ನಾಗರಾಜಗೌಡ, ತಿರುಮಲೇಶ್, ಶಂಕರಪ್ಪ, ನಾಯ್ಡು,
ಸಂಜೀವಪ್ಪ, ಹರೀಷ್ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....