ಚಾಮರಾಜನಗರ | ದೇಶದ ಆಹಾರ ಕ್ಷೇತ್ರ ಸ್ವಾವಲಂಬನೆಗೆ ಬಾಬೂಜೀಯವರ ಕೊಡುಗೆ ಅಪಾರ : ಎಚ್ ವಿ ಚಂದ್ರು

Date:

ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 38ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು
‘ ಕೃಷಿಯಲ್ಲಿ ಹೊಸ ಹೊಸ ತಳಿಗಳನ್ನು ಸಂಶೋಧಿಸಿ ಆಹಾರ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸಲು ಬಾಬೂಜೀ ಅವರ ಕೊಡುಗೆ ಅಪಾರವಾಗಿದೆ ‘ ಎಂದು ತಿಳಿಸಿದರು.

- Advertisement -

” ಶೋಷಿತ ಸಮುದಾಯದಲ್ಲಿ ಜನಿಸಿ ಸಾಕಷ್ಟು ನೋವು, ಅಪಮಾನಗಳನ್ನು ಎದುರಿಸಿ ಶಿಕ್ಷಣವೇ ಶಕ್ತಿ ಎಂದು ನಂಬಿದ್ದ ಡಾ. ಬಾಬು ಜಗಜೀವನ್ ರಾಮ್ ಅವರು ತಳ ಸಮುದಾಯದವರಾದರು ಸಹ ಉಪ ಪ್ರಧಾನಿಯಂತಹ ದೇಶದ ಅತ್ಯುನ್ನತ ಹುದ್ದೆಗೇರಬಹುದು ಎಂಬುದನ್ನು ಸಾಧಿಸಿ ತೋರಿಸಿಕೊಟ್ಟರು. ಸಚಿವ ಸಂಪುಟದಲ್ಲಿ ಆಹಾರ, ಕಾರ್ಮಿಕ, ರಕ್ಷಣಾ ಖಾತೆಗಳನ್ನು ಬಾಬೂಜೀಯವರು ಸಮರ್ಥವಾಗಿ ನಿಭಾಯಿಸಿ ಇತರರಿಗೂ ಮಾದರಿಯಾಗಿದ್ದಾರೆ. ಅವರ ಅದರ್ಶ ಚಿಂತನೆಗಳನ್ನು ಇಂದಿನ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಿದೆ ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು, ಹಾಡಹಗಲೇ ಕೊಲೆಯಾದ ಬಡ ಯುವತಿಯ ಸಾವಿನ ಸುತ್ತ ಕಳಂಕದ ಹುತ್ತ ಹೊತ್ತಿರುವ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ...

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ ಮೊರೆ ಹೋಗುವವರ ಸಂಖ್ಯೆಯೂ ಕಡಿಮೆಯಿಲ್ಲ. ಇಂತಹವರ ಸಮಸ್ಯೆಗೆ ಪರ್ಯಾಯವೊಂದು ಸಿಕ್ಕರೆ ಹೇಗಿರಬಹುದು? ಮೆದುಳಿಗೆ ಅಲ್ಟ್ರಾಸೌಂಡ್‌ ತರಂಗಗಳ ಮೂಲಕ ಪ್ರಚೋದನೆ ನೀಡಿ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು ವರದಿ ಮಾಡುವ ಜವಾಬ್ದಾರಿ- ಇವೆರಡನ್ನೂ ನಿಭಾಯಿಸಬೇಕಾದಾಗ ಮಾಡಿಕೊಳ್ಳುವ ಲೆಕ್ಕಾಚಾರಗಳ ಬಗೆಗಿನ ಒಂದು ಸ್ವಾನುಭವ. ಕಳೆದ ಕೆಲವು ವಾರಗಳಿಂದ ಭಾರತದಲ್ಲಿ ಹೆಣ್ಣುಮಕ್ಕಳ ಮೇಲೆ...

ಭಾರತದಲ್ಲಿ ಆಹಾರಕ್ಕೆ ಆಹಾಕಾರ ಉಂಟಾಗಿದ್ದ ಸಂದರ್ಭದಲ್ಲಿ ಆಹಾರ ಖಾತೆಯನ್ನು ವಹಿಸಿಕೊಂಡ ಬಾಬುಜೀಯವರು ವೈಜ್ಞಾನಿಕ ಕೃಷಿಗೆ ಒತ್ತು ನೀಡುವ ಮೂಲಕ ಹೊಸ ಹೊಸ ತಳಿಗಳ ಅವಿಷ್ಕಾರಕ್ಕೆ ನಾಂದಿ ಹಾಡಿದರು. ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕರ ದೌರ್ಜನ್ಯ, ದಬ್ಬಾಳಿಕೆಗಳನ್ನು ತಡೆದು ಕಾರ್ಮಿಕರ ಕಲ್ಯಾಣಕ್ಕೆ ಶ್ರಮಿಸಿದರು. ರಕ್ಷಣಾ ಮಂತ್ರಿಯಾಗಿದ್ದ ಸಮಯದಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾರತ ಸೈನ್ಯವನ್ನು ಯಶಸ್ವಿಯಾಗಿ ಮುನ್ನೆಡೆಸಿದ ಕೀರ್ತಿ ಬಾಬೂಜೀಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತ ಮಾತನಾಡಿ ‘ ದೇಶ ಕಂಡ ಧೀಮಂತ ನಾಯಕ ಬಾಬು ಜಗಜೀವನ್ ರಾಮ್. ದೇಶದ ಅಭಿವೃದ್ಧಿಗೆ ಬಾಬೂಜೀಯವರ ಕೊಡುಗೆ ಅಪಾರವಾಗಿದೆ. ಜನ ಸಾಮಾನ್ಯರಿಗೆ ಸ್ವಾಭಿಮಾನದ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ವೇದಿಕೆ ಒದಗಿಸಿಕೊಟ್ಟ ಬಾಬೂಜೀಯವರ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ ‘ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಮಾತನಾಡಿ ” ಬಿಹಾರದ ಕುಗ್ರಾಮದಲ್ಲಿ ಹುಟ್ಟಿ ಭಾರತದ ರಾಜಕೀಯ ಇತಿಹಾಸಲ್ಲಿ ಅಪೂರ್ವ ಸಾಧನೆಗೈದವರು ಬಾಬು ಜಗಜೀವನ್ ರಾಮ್. ಅಸ್ಪೃಶ್ಯತೆ ಆಚರಣೆ ವ್ಯಾಪಕವಾಗಿದ್ದ ಆಗಿನ ಕಾಲದಲ್ಲಿ ಶಾಲಾ ದಿನಗಳಿಂದಲೂ ಹುಟ್ಟು ಹೋರಾಟಗಾರರಾಗಿದ್ದ, ಎದೆಗುಂದದೇ ಜನರನ್ನು ಜಾಗೃತಗೊಳಿಸಿದರು. ಹಸಿರು ಕ್ರಾಂತಿ ಹುಟ್ಟು ಹಾಕಿ ದೇಶದ ಆಹಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದರು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬೂ ಜಗಜೀವನ್ ರಾಮ್ ಈ ನಾಡು ಕಂಡ ಮಹಾನ್ ನಾಯಕರು. ಅವರ ವಿಚಾರಧಾರೆಗಳು ಅದರ್ಶ ಮೌಲ್ಯಯುತ ಗುಣಗಳನ್ನು ನಾವೆಲ್ಲರೂ ಅನುಸರಿಸಬೇಕಾಗಿದೆ ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಂಗೀತಕ್ಕೆ ಮನೋ ಚಿಕಿತ್ಸೆ ಗುಣವಿದೆ : ಡಾ ಡಿ ತಿಮ್ಮಯ್ಯ

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಸಮಾಜ ಕಲ್ಯಾಣ ಉಪನಿರ್ದೇಶಕಿ ಬಿಂದ್ಯಾ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಂಜುಂಡೇಗೌಡ, ಜನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ, ಸಮಾಜದ ಮುಖಂಡರಾದ ಬಸವನಪುರ ರಾಜಶೇಖರ್, ಚಾ.ಗು. ನಾಗರಾಜು, ಎಂ. ಶಿವಕುಮಾರ್, ಡ್ಯಾನ್ಸ್ ಬಸವರಾಜು, ಸೆಂಟ್ರಿಂಗ್ ಸಿದ್ದಪ್ಪ, ಸೋಮೇಶ್, ಮನು, ರಾಚಪ್ಪ, ಮಹೇಶ್, ಆಲೂರು ನಾಗೇಂದ್ರ ಸೇರಿದಂತೆ ಇನ್ನಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...