ಬೀದರ್‌ | ಬಲಿಗಾಗಿ ಕಾದಿರುವ ರಸ್ತೆ ಗುಂಡಿಗಳು : ದುರಸ್ತಿ ಯಾವಾಗ?

Date:

ಕಮಲನಗರ ತಾಲೂಕಿನ ಚಿಕ್ಕಿ(ಯು) ಗಡಿ ಗ್ರಾಮದಿಂದ ದಾಬಕಾ(ಸಿಎಚ್)‌ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಮೊಳಕಾಲುದ್ದ ತಗ್ಗು-ಗುಂಡಿಗಳೇ ನಿರ್ಮಾಣವಾಗಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಪ್ರಯಾಣಿಸಲು ಪರದಾಡುತ್ತಿದ್ದಾರೆ.

- Advertisement -

ರಾಜ್ಯದ ಗಡಿ ತಾಲೂಕಿನ ಅಂಚಿನಲ್ಲಿರುವ ಚಿಕ್ಲಿ(ಯು) ಕ್ರಾಸ್‌ ಮೂಲಕ ಭವಾನಿ ದಾಬಕಾ, ಖೇರ್ಡಾ(ಬಿ) ಮೂಲಕ ಔರಾದ್‌ ತಾಲೂಕು ಕೇಂದ್ರಕ್ಕೆ ಸಂಪರ್ಕಿಸುವ ಜಿಲ್ಲಾ ಮುಖ್ಯ ಹೆದ್ದಾರಿ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭವಾನಿ ದಾಬಕಾ ಗ್ರಾಮದಿಂದ ಚಿಕ್ಲಿ(ಯು) ಗಡಿ ಭಾಗದವರೆಗೆ ಸುಮಾರು 6 ಕಿ.ಮೀ. ಇರುವ ರಸ್ತೆಯ ಡಾಂಬರ್ ಕಿತ್ತು ಹೋಗಿದೆ. ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿದ್ದು, ಜಲ್ಲಿಕಲ್ಲುಗಳು ತೇಲಿವೆ. ರಸ್ತೆ ತಗ್ಗುಗಳಲ್ಲಿ ಮಳೆ ನೀರು ಸಂಗ್ರಹವಾಗಿ ಹೊಂಡಗಳಂತೆ ಕಾಣುತ್ತಿವೆ. ಇದೇ ರಸ್ತೆಯಲ್ಲಿ ಪ್ರಯಾಣಿಕರು ನಿತ್ಯ ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ಅಳಲು ತೋಡಿಕೊಳುತ್ತಿದ್ದಾರೆ.

WhatsApp Image 2024 07 28 at 12.34.31 PM 1
ದಾಬಕಾ ಬಳಿ ಸೇತುವೆ ಮೇಲಿನ ರಸ್ತೆಯಲ್ಲಿ ಭಾರಿ ಪ್ರಮಾಣದ ತಗ್ಗು ಬಿದ್ದಿರುವುದು

ಸರ್ಕಾರ ರಸ್ತೆ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಅನುದಾನ ಖರ್ಚು ಮಾಡುತ್ತಿದೆ. ಆದರೆ, ಸಮಪರ್ಕವಾಗಿ ಅನುಷ್ಠಾನವಾಗದ ಕಾರಣ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಅಧೋಗತಿಗೆ ತಲುಪಿವೆ. ಇಂತಹ ದುಸ್ಥಿತಿ ನೋಡಿದರೆ ಸರ್ಕಾರದಿಂದ ಬಿಡಗಡೆಯಾದ ಹಣ ನಿಜಕ್ಕೂ ನಿರ್ದಿಷ್ಷ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಸಣ್ಣ ಅನುಮಾನ ಕಾಡದೇ ಇರದು!

ಮಹಾರಾಷ್ಟ್ರ ಸಂಪರ್ಕ ರಸ್ತೆ :

ʼಔರಾದ್‌ ತಾಲೂಕು ಕೇಂದ್ರದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವುದು ಇದೇ ಜಿಲ್ಲಾ ಹೆದ್ದಾರಿ ರಸ್ತೆಯಾಗಿದ್ದರಿಂದ ನಿತ್ಯ ಮಹಾರಾಷ್ಟ್ರ, ಕರ್ನಾಟಕ ರಾಜ್ಯದ ಹತ್ತಾರು ಸಾರಿಗೆ ಬಸ್‌ ಸೇರಿದಂತೆ ಇತರ ವಾಹನಗಳು ಸಂಚರಿಸುತ್ತವೆ. ಪ್ರಯಾಣದ ವೇಳೆ ಕೆಲ ದ್ವಿಚಕ್ರ ಸವಾರರು ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾದ ಘಟನೆಗಳು ಜರುಗಿವೆʼ ಎಂದು ಚಿಕ್ಲಿ(ಯು) ಗ್ರಾಮದ ಅಸ್ಲಾಂ ತಿಳಿಸುತ್ತಾರೆ.

WhatsApp Image 2024 07 28 at 12.36.37 PM
ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ ಜಾಧವ್‌ ಮಾತನಾಡಿದರು.

ದಾಬಕಾ ಹೋಬಳಿ ಕೇಂದ್ರ ವ್ಯಾಪ್ತಿಗೆ ಸುತ್ತಲಿನ 30ಕ್ಕೂ ಹೆಚ್ಚಿನ ಗ್ರಾಮ, ತಾಂಡಾಗಳು ಬರುತ್ತವೆ. ಹೀಗಾಗಿ ದಿನಾಲೂ ನೂರಾರು ಜನರು ವಿವಿಧ ಕೆಲಸ ಕಾರ್ಯಗಳಿಗೆ ಹಾಗೂ ಸಂತೆ ಮಾಡಲು ಹೋಬಳಿ ಕೇಂದ್ರಕ್ಕೆ ಬರುತ್ತಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆಯಲ್ಲಿ ಗುಂಡಿ ಇದೆಯೋ? ಗುಂಡಿಯಲ್ಲಿ ರಸ್ತೆ ಇದೆಯೋ !

ʼದಾಬಕಾ-ಚಿಕ್ಲಿ ಗಡಿಯವರೆಗೆ ಇರುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯಲ್ಲಿ ಗುಂಡಿ ಇದೆಯೋ? ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎಂಬ ಪ್ರಶ್ನೆ ಮೂಡುತ್ತದೆ. ಅಷ್ಟರ ಮಟ್ಟಿಗೆ ಹೆಜ್ಜೆ ಹೆಜ್ಜೆಗೂ ಗುಂಡಿಗಳಿಂದ ಕೂಡಿದೆ. ಇದರಿಂದ ಮಹಿಳೆಯರು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ. ರಸ್ತೆ ದುರಸ್ತಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಹೊಸ ರಸ್ತೆ ನಿರ್ಮಿಸಬೇಕುʼ ಎಂದು ದಾಬಕಾ ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ ಜಾಧವ್ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಔರಾದ ತಾಲೂಕು ಪ್ರಭಾರಿ ಎಇಇ ಸುನೀಲ ಚಿಲ್ಲರ್ಗೆ ಈದಿನ.ಕಾಮ್‌ ಜೊತೆ ಮಾತನಾಡಿ, ʼನಾನು ಹೊಸದಾಗಿ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ರಸ್ತೆ ಸಮಸ್ಯೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಹೊಸ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆʼ ಎಂದು ತಿಳಿಸಿದರು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...