ರೈತ ವಿರೋಧಿ ಕಾಯ್ದೆ ಹಿಂಪಡೆದು, ಕಾಂಗ್ರೆಸ್ ನುಡಿದಂತೆ ನಡೆಯಲಿ: ಬಡಗಲಪುರ ನಾಗೇಂದ್ರ

Date:

ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಬಡಗಲಪುರ ನಾಗೇಂದ್ರ, “ಮೈಸೂರು ಜಿಲ್ಲೆಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು ಖುಷಿಯ ವಿಷಯ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಇಬ್ಬರು ರಾಜ್ಯದ ಒಳಿತಿಗಾಗಿ ಕೆಲಸ ಮಾಡಲಿ” ಎಂದರು.

“ಸರ್ವೋದಯ ಕರ್ನಾಟಕ ಪಕ್ಷದಿಂದ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾಗಿರುವುದು ಖುಷಿಯ ವಿಚಾರ. ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ನಂಬಿ ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿ ಸರ್ಕಾರವನ್ನು ಜನತೆ ಕಿತ್ತೆಸೆದಿದ್ದಾರೆ. ಇದರ ನಡುವೆ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೈತ ವಿರೋಧಿ ಕಾಯ್ದೆಗಳಾದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಹಾಗೂ ಸಂರಕ್ಷಣಾ ಕಾಯ್ದೆಯನ್ನು ವಾಪಾಸ್ ಪಡೆಯಬೇಕು. ಕೇಂದ್ರ ಸರ್ಕಾರ ರೂಪಿಸಿರುವ ವಿದ್ಯುಚ್ಛಕ್ತಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರಬಾರದು. ಡಾ. ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ದೊರೆಕಿಸಬೇಕು” ಎಂದು ಸರ್ಕಾರದ ಮುಂದೆ ಬಡಗಲಪುರ ನಾಗೇಂದ್ರ  ಬೇಡಿಕೆಗಳನ್ನಿಟ್ಟರು.

ಸುದ್ಧಿಗೋಷ್ಠೀಯಲ್ಲಿ ಹೊಸಕೋಟೆ ಬಸವರಾಜ್, ಪ್ರಸನ್ನ ಎನ್ ಗೌಡ ಹಾಗೂ ಇತರರು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ತಂಬಾಕು ಮುಕ್ತ ಕೃಷಿ ಗುರಿ; ಆರ್‌ಡಿಪಿಆರ್ ಜೊತೆಗೆ ಕೈಜೋಡಿಸಲು ಮುಂದಾದ ಕೆಎಸ್‌ಟಿಸಿಸಿ

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...