ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ವೇಗವಾಗಿ ಬೆಳೆಯುತ್ತಿದೆ. ಈ ತಾಲೂಕಿಗೆ ಗ್ರಾಮೀಣ ಠಾಣೆಯ ಅವಶ್ಯಕತೆಯಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ರಾಥೋಡ್ ಅವರಿಗೆ ಪಿಎಸ್ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಭ್ರಷ್ಠಾಚಾರ ವಿರೋಧಿ ವಿಭಾಗ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ತಾಲೂಕಿನ ಬೆಳವಣಿಗೆಗೆ ತಕ್ಕಂತೆ ಪೊಲೀಸ್ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದೆ. ಇದರಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಕೂಡಲೇ ಗ್ರಾಮೀಣ ಠಾಣೆ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.
ಈ ವೇಳೆ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಅಂಜುಮ್ ಕಲಮಡಿ, ಜಿಲ್ಲಾಧ್ಯಕ್ಷ ಸುನೀಲ ಕೆಳಗೇರಿ, ರಾಜ್ಯ ಯುವ ಘಟಕ ಅಧ್ಯಕ್ಷ ಅಶೋಕ ಗುರಕೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೇರಿ ಇತರರು ಇದ್ದರು.
ಇದನ್ನೂ ಓದಿ: ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ