ಕಲಬುರಗಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಅವಮಾನ ಮಾಡಿದ್ದನ್ನು ಖಂಡಿಸಿ, ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಸಂಘಟನೆಯು ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ, ವಿಶ್ವಜ್ಞಾನಿ, ಭಾರತರತ್ನ, ಸಮಾನತೆಯ ಹರಿಕಾರ, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಕೆಲವು ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಹೀಗೆ ಅವಮಾನ ಮಾಡಿದವರು ಜಾತಿವಾದಿ, ಕೋಮುವಾದಿ, ಮನಸ್ಥಿತಿಯ ವ್ಯಕ್ತಿಗಳು. ಭಾರತೀಯ ಸಂವಿಧಾನದ ಪಿತಾಮಹರಾದ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಬಂಧಿತ ಆರೋಪಿಗಳ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ, ಅವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಈ ತರಹದ ಕೃತ್ಯವನ್ನು ಮತ್ತೊಮ್ಮೆ ಮರುಕಳಿಸದಂತೆ ನೋಡಿಕೊಳ್ಳುಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ಉಗ್ರವಾಗಿ ಸರ್ಕಾರಕ್ಕೆ ಒತ್ತಾಯಿಸುತ್ತದೆ ಎಂದರು.
ಈ ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಪ್ರಗತಿಪರ ಚಿಂತಕರು ಉಪಸ್ಥಿತರಿದ್ದರು.