ಬಾಗಲಕೋಟೆ | ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರಬೇಕು: ಬಸವರಾಜ ಹೊರಟ್ಟಿ

Date:

ಬೆಂಗಳೂರು ಕೇಂದ್ರಿಕೃತ ಕಲಾವಿದರನ್ನು ಪ್ರೋತ್ಸಾಹಿಸುವುದರ ಹೊರತಾಗಿಯೂ ಉತ್ತರ ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕೆಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ರನ್ನ ವೈಭವದ ಎರಡನೇ ದಿನವಾದ ಭಾನುವಾರ ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಉತ್ತರ ಕರ್ನಾಟಕದಲ್ಲಿ ಸಮರ್ಥ ಕಲಾವಿದರಿದ್ದಾರೆ. ಅವರಿಗೆ ವೇದಿಕೆ ಸಿಗುವ ಕೆಲಸವಾಗಬೇಕು” ಎಂದು ವೇದಿಕೆಯಲ್ಲಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರಿಗೆ ಸಲಹೆ ನೀಡಿದರು.

“ಅಖಂಡ ವಿಜಯಪುರ ಜಿಲ್ಲೆಯು ರನ್ನ ಹುಟ್ಟಿದ ನಾಡು. ಇಲ್ಲಿ ಜನಸಿರುವ ನಾವುಗಳೇ ಪುಣ್ಯವಂತರು. ನಾವು ರನ್ನನಂತೆ ಆಗದಿದ್ದರೂ ಅವರು ಜನ್ಮತಾಳಿದ ಭೂಮಿಯಲ್ಲಿ ಜನಿಸಿರುವುದು ಹೆಮ್ಮೆಯ ಸಂಗತಿ” ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾತನಾಡಿ, “ರನ್ನ ಸೇರಿದಂತೆ ಮಹಾಪುರಷರನ್ನು ಯಾವುದೇ ಜಾತಿ, ಧರ್ಮಕ್ಕೆ ಸೀಮಿತಗೊಳಿಸುವ ಕೆಲಸವಾಗಬಾರದೆಂಬ ಕಾರಣಕ್ಕಾಗಿಯೇ ನಮ್ಮ ಇಲಾಖೆಯಿಂದ ಜಯಂತಿ ಹಾಗೂ ಉತ್ಸವಗಳನ್ನು ಸಂಘಟಿಸುತ್ತಿದ್ದೇವೆ. ಇಂಥ ಕಾರ್ಯಕ್ರಮಗಳ ಮೂಲಕ ಯುವಸಮೂಹಕ್ಕೆ ಮಹಾಪುರುಷರ ಕೊಡುಗೆಗಳನ್ನು ಪರಿಚಯಿಸುವ ಕೆಲಸ ಮಾಡಲಾಗುತ್ತಿದೆ” ಎಂದರು.

“ಬಾಗಲಕೋಟೆ ಜಿಲ್ಲೆಯಲ್ಲಿ ಚಾಲುಕ್ಯ ಹಾಗೂ ರನ್ನ ಉತ್ಸವಗಳು ಅದ್ಧೂರಿಯಾಗಿ ಜರುಗುತ್ತವೆ. ನಾನು ಚಿಕ್ಕಿಂದಿನಿಂದಲೂ ಚಾಲುಕ್ಯ ಉತ್ಸವ ನೋಡುತ್ತ ಬೆಳೆದಿದ್ದೇನೆ. ರನ್ನ ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ₹2 ಕೋಟಿ ಅನುದಾನ ಒದಗಿಸಲಾಗಿದೆ. ಮುಂದಿನ ವರ್ಷ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಾಗುವುದು” ಎಂದು ಭರವಸೆ ನೀಡಿದರು.

“ಅದ್ಧೂರಿ ರನ್ನ ಉತ್ಸವ ಸಂಘಟಿಸಿದ ಸಚಿವ ಆರ್ ಬಿ ತಿಮ್ಮಾಪುರ, ಜಿಲ್ಲಾಧಿಕಾರಿ ಕೆ ಎಂ ಜಾನಕಿ ಹಾಗೂ ಜಿಲ್ಲಾಡಳಿತವನ್ನು ಅಭಿನಂದಿಸಲಾಗುವುದು” ಎಂದರು.

ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, “ಹಿಂದೆ ಹಲವು ವರ್ಷಗಳ ಕಾಲ ರನ್ನ ಉತ್ಸವವನ್ನು ಆಚರಿಸಲಾಗಿತ್ತು. ಆದರೆ ಕೋವಿಡ್, ಅತಿವೃಷ್ಟಿ, ಅನಾವೃಷ್ಟಿಯಂಥ ಕಾರಣಗಳಿಂದ ಉತ್ಸವ ನಿಂತುಹೋಗಿತ್ತು. ಆದರೆ ಈಗ ಸಚಿವ ಆರ್ ಬಿ ತಿಮ್ಮಾಪೂರ ಅವರ ಪ್ರಯತ್ನದ ಫಲವಾಗಿ ಅದ್ಧೂರಿ ಉತ್ಸವ ನಡೆಯುತ್ತಿರುವುದು ಖುಷಿಯ ಸಂಗತಿ” ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಫೂರ ಮಾತನಾಡಿ, “ರನ್ನ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೇರಿ ಎಲ್ಲರ ಸಹಕಾರವನ್ನು ಸ್ಮರಿಸುವುದಾಗಿ ಹೇಳಿದರು. ರನ್ನನ ಕಾಲದ ಶಾಸನಗಳು ರೂಗಿ ಗ್ರಾಮದಲ್ಲಿ ಪತ್ತೆಯಾಗಿದ್ದು, ಅವುಗಳ ಸಂಶೋಧನೆ ಕಾರ್ಯ ನಡೆಯಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಹಳೆಯ ವೈಷಮ್ಯದ ಹಿನ್ನೆಲೆ ಮಹಿಳೆಯ ಭೀಕರ ಕೊಲೆ

ವಿಧಾನ ಪರಿಷತ್ ಸದಸ್ಯ ಪಿ‌ ಎಚ್ ಪೂಜಾರ ಮಾತನಾಡಿ, “ರನ್ನ ಕುರಿತಾದ ಸಂಶೋಧನೆಗೆ ಹೆಚ್ಚಿನ ಒತ್ತು ಸಿಗಬೇಕು. ಈ ಕುರಿತಾಗಿ ಸಂಶೋಧನೆಯಲ್ಲಿ ತೊಡಗಿರುವವರಿಗೆ ಪ್ರೋತ್ಸಾಹ ಒದಗಿಸುವ ಕೆಲಸವಾಗಬೇಕು” ಎಂದರು.

ಬಂಡಿಗಣಿ ಮಠದ ಬಸವಗೋಪಾಲ, ನೀಲಮಾಣಿಕ ಮಠದ ಚಕ್ರವರ್ತಿ ಶ್ರೀದಾನೇಶ್ವರ ಸ್ವಾಮೀಜಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ವಿಪ ಸದಸ್ಯೆ ಉಮಾಶ್ರೀ, ಜಿಲ್ಲಾಧಿಕಾರಿ ಕೆ ಎಂ ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಎಸ್‌ಪಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಎಸಿ ಶ್ವೇತಾ ಬೀಡಿಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರಣಕುಮಾರ ಜೈನಾಪುರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...