ಸಮಾಜದಲ್ಲಿ ಶಾಂತಿ, ಸಹಾನುಭೂತಿ ಮತ್ತು ಸಹಬಾಳ್ವೆ ಹೆಚ್ಚಲು ಬಕ್ರೀದ್‌ನಂತರ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.
ಬಕ್ರೀದ್ ಹಬ್ಬದ ಪ್ರಯುಕ್ತ ಇಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ನೂತನವಾಗಿ ನಿರ್ಮಿಸಿರುವ ಈದ್ಗಾ ಮಸ್ಜೀದನ್ನು ಉದ್ಘಾಟಿಸಿದರು.

ಸಮಾರಂಭದಲ್ಲಿ ಉಸ್ಮಾನಗಣಿ ಹುಮ್ನಾಬಾದ, ಬಾವುದ್ದೀನ್ ಖಾಜಿ, ಮೋಹಿನುದ್ದೀನ್ ಬಾಷಾ, ಹುಣಚಗಿ ಜನಾಬ್, ಮೊಹಮ್ಮದ್ ಗೌಸ್, ಗಡಾದ ಯುಸೋಫ್ ಭಗವಾನ, ಸಿರಾಜ್ ಹುಚಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಬಾಗಲಕೋಟೆ | ಬಾಕಿ ಕಬ್ಬು ಬಿಲ್ ಪಾವತಿ ವಿಳಂಬ; ಕಾರ್ಖಾನೆ ಮಾಲಿಕರ ಮನೆಗೆ ಮುತ್ತಿಗೆ ಎಚ್ಚರಿಕೆ