ಬಾಗಲಕೋಟೆ | ಸಿಬ್ಬಂದಿಗಳಿಲ್ಲದ ಬಲಕುಂದಿ ಗ್ರಾಮ ಪಂಚಾಯಿತಿಗೆ ಬೀಗ

Date:

ಸಾರ್ವಜನಿಕ ಸೇವೆ ಸಮಯದಲ್ಲಿ ಗ್ರಾಮ ಪಂಚಾಯತ್ ಗೆ ಬೀಗ ಹಾಕಿ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಸಮಸ್ಯೆಗಳನ್ನು ಕೇಳಲು ಹೋದ ಸಾರ್ವಜನಿಕರಿಗೆ ಬಲಕುಂದಿ ಗ್ರಾಮ ಪಂಚಾಯತಿಯಲ್ಲಿ ಯಾರು ಸಿಬ್ಬಂದಿಗಳು ಇಲ್ಲದ ಕಾರಣ ಗೊಂದಲ ಉಂಟಾಗಿದ್ದು, ಜನರ ಸಮಸ್ಯೆ ಆಲಿಸುವವರೇ ಇಲ್ಲದಂತಾಗಿದೆ.

- Advertisement -

ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲ್ಲೂಕಿನ ಬಲಕುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬಲಕುಂದಿ ತಾಂಡಾ ೧, ತಾಂಡಾ ೨ , ಹೊಸುರು ಗ್ರಾಮದ ಸಾರ್ವಜನಿಕರು ಸಮಸ್ಯೆಗಳ ಕುರಿತು ಬಲಕುಂದಿ ತಾಂಡಾ ಗ್ರಾಮದ ನಿವಾಸಿ, ಎಸ್. ಎಫ್. ಐ ಮುಖಂಡ ಚಂದ್ರು ರಮೇಶ್ ರಾಠೋಡ ಅವರು ಮನವಿ ಸಲ್ಲಿಸಲು ಸೋಮವಾರ ಪಂಚಾಯಿತಿಗೆ ಹೋಗಿದ್ದರು.  ಪಂಚಾಯಿತಿ ಬಾಗಿಲು ತೆರೆಯದೆ ಇದ್ದುದರಿಂದ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

“ಸುಮಾರು ಮದ್ಯಾನ 3(೧-೪) ಗಂಟೆಯಾದರೂ ಯಾವ ಅಧಿಕಾರಿಗಳು ಬರಲಿಲ್ಲ. ಇತರಹದ ವ್ಯವಸ್ಥೆಯಿಂದ ಪಂಚಾಯತಿ ಅಭಿವೃದ್ಧಿ ಕುಂಠಿತಗೊಂಡಿದೆ. ಕಂದಾಯ ಗ್ರಾಮವಾಗಿ ಘೋಷಣೆಯಾಗಿ ಸುಮಾರು 5 ವರ್ಷವಾದರೂ ಕೂಡ ಅಲ್ಲಿನ ಜನರಿಗೆ ಹಕ್ಕುಪತ್ರಗಳನ್ನು ನೀಡಿಲ್ಲ. ಸರಿಯಾಗಿ ವಿದ್ಯುತ್ ಸಂಪರ್ಕ, ನೀರಿನ ವ್ಯವಸ್ಥೆ, ಚರಂಡಿ ವ್ಯವಸ್ಥೆ ಇಲ್ಲ” ಎಂದು ಚಂದ್ರು ರಾಠೋಡ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯಾದ್ಯಂತ ಸಂಭ್ರಮದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸ

“ಇಷ್ಟೆಲ್ಲಾ ಸಮಸ್ಯೆಗಳು ಇದ್ದರೂ ಸ್ಥಳೀಯ ಶಾಸಕರು ವಿಜಯಾನಂದ ಕಾಶಪ್ಪನವರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಕೂಡಲೇ ಆದಷ್ಟು ಬೇಗ ಸಮಸ್ಯೆಗಳನ್ನು ಸರಿಪಡಿಸಬೇಕು”  ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಜಮಖಂಡಿ | ಜೋಡೆತ್ತು ಸಾಕುವ ರೈತರಿಗೆ ಮಾಸಿಕ 11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ

ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಎತ್ತುಗಳನ್ನು ಬಳಸಿಕೊಂಡು ಕೃಷಿ ಮಾಡುತ್ತಿರುವ ರೈತರನ್ನು ಸರ್ಕಾರ...