ಬಾಗಲಕೋಟೆ | ಒಳಮೀಸಲಾತಿ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ಹಿಂದೇಟು; ಮಾದಿಗ ಸಮುದಾಯ ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿರುವುದರಿಂದ ಒಳಮೀಸಲಾತಿ ಆದೇಶ ಹೊರಡಿಸಲು ತಡ ಮಾಡುತ್ತಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಿವರಾಯ ಅಕ್ಕರಕಿ ಆರೋಪಿಸಿದರು.

- Advertisement -

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಮಾದಿಗ ಸಮುದಾಯದ ವತಿಯಿಂದ ಶನಿವಾರ ಪ್ರತಿಭಟನೆ‌ ನಡೆಸಿ, ಅಂಬೇಡ್ಕರ್ ವೃತ್ತದಿಂದ ಆರಂಭವಾದ ಮೆರವಣಿಗೆಯಲ್ಲಿ ಹಲಿಗೆ ಬಾರಿಸುತ್ತ ಸಾಗಿದ ಸಮುದಾಯದ ಜನರು ತಹಶೀಲ್ದಾರ್ ಕಾರ್ಯಾಲಯದವರೆಗೆ ತಹಶೀಲ್ದಾರ್ ಸುಹಾಸ್ ಇಂಗಳೆ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಶೋಷಿತ ಸಮಾಜಗಳಿಗೆ ಅಗತ್ಯವಾಗಿರುವ ಒಳಮೀಸಲಾತಿ ಕಲ್ಪಿಸುವ ಹೊಣೆಗಾರಿಕೆಯನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ. ಆದರೆ, ರಾಜ್ಯ ಸರ್ಕಾರವು ಮೀನಾಮೇಷ ಎಣಿಸುತ್ತಿದೆ” ಎಂದು ದೂರಿದರು.

“ಸರ್ಕಾರ ವಿಳಂಬನೀತಿ ಅನುಸರಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಒಳಮೀಸಲಾತಿ ವರ್ಗೀಕರಣದ ಕುರಿತು ಮಾದಿಗ ಸಮಾಜದ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಧ್ವನಿ ಎತ್ತಲೇಬೇಕು” ಎಂದು ಹೇಳಿದರು.

ಒಳಮೀಸಲಾತಿಗೆ ಆಗ್ರಹ 1

ಘಟಕದ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ ಮಾತನಾಡಿ, “ಬೇರೆ ರಾಜ್ಯಗಳಲ್ಲಿ ಮೀಸಲಾತಿ ಜಾರಿಗೆ ತಂದಿರುವ ಕಾಂಗ್ರೆಸ್ ಪಕ್ಷಕ್ಕೆ, ಕರ್ನಾಟಕದಲ್ಲಿ ಜಾರಿಗೆ ತರಲು ಯಾವ ತೊಂದರೆಯಾಗಿದೆ. ಸಚಿವರುಗಳಾದ ಆರ್ ಬಿ ತಿಮ್ಮಾಪುರ, ಕೆ ಎಚ್‌ ಮುನಿಯಪ್ಪ ರಾಜೀನಾಮೆ ನೀಡಿ ಒಳಮೀಸಲಾತಿ ಜಾರಿಗೆ ತರುವ ಹೋರಾಟದಲ್ಲಿ ಭಾಗವಹಿಸಿ, ಸಮಾಜ ನಿಮ್ಮೊಂದಿಗೆ ಇರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಭೀಮಸಿ ಕಲಾದಗಿಯವರ ನುಡಿ ನಮನ ಕಾರ್ಯಕ್ರಮ

ದಲಿತ ಸಂಘರ್ಷ ಬೆಳಗಾವಿ ಸಂಚಾಲಕ ಮಹೇಶ ಹುಗ್ಗಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಬೆಳಗಾವಿ ವಿಭಾಗದ ಮುಖ್ಯಸ್ಥ ಬಸವರಾಜ ಅರವಳಿ, ಎಂಆರ್‌ಎಚ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮು ಚೂರಿ, ಮಾದಿಗೆ ಮೀಸಲಾತಿ ಹೋರಾಟ ಸಮಿತಿಯ ತಾಲೂಕು ಮುಖಂಡ ಶಿವಾನಂದ ಬಿಸನಾಳ, ರಾಜು ಮನ್ನಿಕೇರಿ, ಕೃಷ್ಣಾ ವೈ ಮಾದರ, ಸಿದ್ದು ಮಾದರ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...