ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

Date:

Advertisements

ರಾಜ್ಯದ ಪ್ರಬಲ ಸಮುದಾಯವಾದ ಪಂಚಮಸಾಲಿ ಸಮಾಜದಲ್ಲಿ ಆಂತರಿಕ ಕಲಹಗಳು ತಾರಕಕ್ಕೇರಿದ್ದು, ಕೂಡಲಸಂಗಮ ಪೀಠ ಹಾಗೂ ಸಮಾಜದ ಮೇಲೆ ಹಿಡಿತ ಸಾಧಿಸಲು ಎರಡು ಗುಂಪುಗಳ ನಡುವೆ ತಿಕ್ಕಾಟ ಏರ್ಪಟ್ಟಿದೆ.

ಕೂಡಲಸಂಗಮ ಪೀಠದ ಭವಿಷ್ಯ ನಿರ್ಧರಿಸಲು ಬಾಗಲಕೋಟೆಯಲ್ಲಿ ಏಪ್ರಿಲ್‌ 19ರಂದು ಅಖಿಲ ಭಾರತ ಪಂಚಮಸಾಲಿ ಸಮಾಜ ಟ್ರಸ್ಟ್ ಕರೆದಿದ್ದ ಸಭೆ, ಏಪ್ರಿಲ್‌ 20ರಂದು ಪೀಠಾಧ್ಯಕ್ಷ ಬಸವಜಯಮೃತ್ಯಂಜಯ ಸ್ವಾಮೀಜಿ ಕರೆದಿದ್ದ ಸಭೆಗಳು ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿವೆ. ಆದರೆ, ಸಮಾಜದ ನಾಯಕರೊಳಗಿನ ಅಸಮಾಧಾನ ಶಮನವಾಗಿಲ್ಲ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಬೇಕು ಎಂಬ ಹೋರಾಟವು ರಾಜಕೀಯ ಮೇಲಾಟಕ್ಕೆ ಬಳಕೆಯಾಗುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ, ಕಾಂಗ್ರೆಸ್‌ ಶಾಸಕರು ಹೋರಾಟದ ನೇತೃತ್ವ ವಹಿಸಿದ್ದರು. ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರು. ಈಗ ಕಾಂಗ್ರೆಸ್‌ ಸರ್ಕಾರ ಆಡಳಿತವಧಿಯಲ್ಲಿ ಬಿಜೆಪಿ ಶಾಸಕರು ಹೋರಾಟದ ಮುಂಚೂಣಿಯಲ್ಲಿದ್ದರೆ, ಕಾಂಗ್ರೆಸ್‌ ಶಾಸಕರು ಅಂತರ ಕಾಯ್ದುಕೊಂಡಿದ್ದಾರೆಂಬ ಆರೋಪವಿದೆ.

Advertisements

ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿಗಾಗಿ ಹೋರಾಟಕ್ಕಿಳಿದಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರವಾಗಿತ್ತು. ಅಲ್ಲಿಂದಲೇ ಸಮಾಜದೊಳಗೆ ತಿಕ್ಕಾಟ ತೀವ್ರವಾಗಿತ್ತು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯೊಂದಿಗೆ ಹೋರಾಟ ತಾರಕಕ್ಕೇರಿದೆ.

ಶಾಸಕ ಬಸನಗೌಡ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ್ದನ್ನು ಖಂಡಿಸಿ ಕೂಡಲಸಂಗಮ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಬಹಿರಂಗವಾಗಿ ಹೋರಾಟದ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸ್ವಾಮೀಜಿ ಪರ, ವಿರೋಧ ಹೇಳಿಕೆಗಳು ವ್ಯಕ್ತವಾಗುತ್ತಿವೆ. ಪೀಠದಿಂದ ಅವರನ್ನು ಕೆಳಗಿಳಿಸುವ ಯತ್ನವೂ ನಡೆದಿವೆ ಎನ್ನಲಾಗಿದೆ.

ಪಂಚಮಸಾಲಿ ಸಮಾಜ ದೊಡ್ಡದಿದೆ. 80 ಲಕ್ಷ ಜನಸಂಖ್ಯೆ ಇದೆ. ದೊಡ್ಡ ಜನಸಂಖ್ಯೆಗೆ ಮೂರು ಪೀಠ ಸಾಕಾಗಲ್ಲ. ಇನ್ನೂ ಎರಡು ಪೀಠ ಮಾಡುತ್ತೇವೆಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳುತ್ತಿದ್ದಾರೆ.

ಏಪ್ರಿಲ್‌ 19ರಂದು ಕರೆದಿದ್ದ ಸಭೆಯನ್ನು ಮಾಜಿ ಸಚಿವ ಎ ಬಿ ಪಾಟೀಲ ಮತ್ತು ಕೆಲ ಪ್ರಮುಖರ ಕೋರಿಕೆಯಂತೆ ಮುಂದೂಡಲಾಗಿದೆ. ಶೀಘ್ರದಲ್ಲೇ ಕೂಡಲಸಂಗಮದಲ್ಲಿ ಸಭೆ ಕರೆಯಲಾಗುವುದೆಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಜಿ+1 ಮನೆಗಳನ್ನು ವಿತರಣೆ ಮಾಡದಿದ್ದರೆ ಪುರಸಭೆ ಎದುರು ಧರಣಿ ನಡೆಸಲಾಗುವುದು: ಬಸವರಾಜ ಪೂಜಾರ ಎಚ್ಚರಿಕೆ

ಪಂಚಮಸಾಲಿ ಸಮಾಜದ ಮೊದಲ ಪೀಠ ಹರಿಹರದಲ್ಲಿದೆ. ರಾಜಕೀಯ ಮೇಲಾಟದ ಕಾರಣಕ್ಕೆ ಕೂಡಲಸಂಗಮದಲ್ಲಿ ಎರಡನೇ ಪೀಠ ಆರಂಭವಾಯಿತು. ಎರಡನೇ ಪೀಠದ ಸ್ವಾಮೀಜಿ ತಮಗೆ ಸಮರ್ಪಕವಾಗಿ ಸ್ಪಂದಿಸಲಿಲ್ಲವೆಂಬ ಕಾರಣಕ್ಕೆ ಕೆಲ ರಾಜಕಾರಣಿಗಳು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರಿನಲ್ಲಿ ಮೂರನೇ ಪೀಠ ಸ್ಥಾಪಿಸಿದರು.

“ಕೂಡಲಸಂಗಮ ಪೀಠದಿಂದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೆಳಗಿಳಿಸಿದರೆ ಅಲ್ಲಿಯೇ ಜಾಗ ತೆಗೆದುಕೊಂಡು ಮತ್ತೊಂದು ಪೀಠ ಸ್ಥಾಪಿಸಲಾಗುವುದು” ಎಂದು ಮಾಜಿ ಸಚಿವ ಸಿ ಸಿ ಪಾಟೀಲ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X