ಸಾಲಬಾಧೆಯಿಂದ ಬೇಸತ್ತ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಲಾಪುರ ಗ್ರಾಮದಲ್ಲಿ ನಡೆದಿದೆ.
ಗುರುಬಸಪ್ಪ ನಂದುಗೌಡ ಪಾಟೀಲ(37) ಮೃತ ರೈತ. ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಸಾಲ ಮಾಡಿದ್ದರು ಎನ್ನಲಾಗಿದೆ.
ಸಾಲಗಾರನಾಗಿದ್ದ ರೈತ ಬೆಳೆ ಸರಿಯಾಗಿ ಬಾರದ್ದನ್ನು ಕಂಡು ತನ್ನ ತೋಟದ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಾಗಿದ್ದ ರೈತ ಗುರುಬಸಪ್ಪನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಕ್ರಮವಾಗಿ ವ್ಯಾಪಿಸಿರುವ ಜೂಜು ಅಡ್ಡೆ ತಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ
ಮೃತ ರೈತನಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.