ಬಾಗಲಕೋಟೆ | ಒಳಮೀಸಲಾತಿ ಜಾರಿಗೆ ವಿಳಂಬ; ಅ.16ರಂದು ರಾಜ್ಯಾದ್ಯಂತ ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಅಕ್ಟೋಬರ್‌ 16ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡರು ಹೇಳಿದರು.

ಬಾಗಲಕೋಟೆ ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಾನಂದ ಟವಳಿ, ಮುತ್ತಣ್ಣ ಬೆಣ್ಣೂರ ಅವರು, “ಜಣಗಣತಿ ನೆಪವೊಡ್ಡಿ ಒಳಮೀಸಲಾತಿ ವಿಳಂಬ ಮಾಡಲಾಗುತ್ತಿದೆ” ಎಂದು ದೂರಿದರು.

“ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಒಳಮೀಸಲಾತಿ ಜಾರಿಗೊಳಿಸುವುದಾಗಿ ಗ್ಯಾರಂಟಿ ನೀಡಲಾಗಿತ್ತು. ಸುಪ್ರೀಂ ಕೋರ್ಟ್ ಕೂಡಾ ಒಳಮೀಸಲಾತಿ ಜಾರಿ ನಿರ್ಧಾರ ರಾಜ್ಯ ಸರ್ಕಾರಗಳಿಗೆ ಸೇರಿದ್ದೆಂದು ಹೇಳಿದೆ. ಅದನ್ನು ಜಾರಿಗೊಳಿಸದೆ ನ್ಯಾಯಾಂಗ ನಿಂದನೆ ಮಾಡಲಾಗುತ್ತಿದೆ” ಎಂದು ಟೀಕಿಸಿದರು.

Advertisements

“ಸದಾಶಿವ ಆಯೋಗ ವರದಿ 2011ರ ಜನಗಣತಿ ಸಂಖ್ಯಾಧಾರಗಳೊಂದಿಗೆ ಪುನರ್ ಪರಿಶೀಲಿಸಿ ವರದಿ ಕೊಡಲು ರಚಿಸಿದ್ದ ಸಂಪುಟ ಅನುಮತಿ ಅತ್ಯಂತ ವೈಜ್ಞಾನಿಕ ವರದಿ ನೀಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೀಡಿದ್ದ ಈ ವರದಿಯನ್ನು ಮಾನ್ಯಗೊಳಿಸಿ ಒಳಮೀಸಲಾತಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

“ಒಳಮೀಸಲಾತಿ ಜಾರಿಗೊಳಿಸುವವರೆಗೆ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬಾರದು. ಇದರಿಂದ ಹಲವರಿಗೆ ಅನ್ಯಾಯವಾಗುತ್ತದೆ. ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಸಚಿವರಾದ ಆ‌ರ್ ಬಿ ತಿಮ್ಮಾಪುರ, ಕೆ ಎಚ್ ಮುನಿಯಪ್ಪ ಅವರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೂ, ಚಿಂತನೆ ಮಾಡಿಲ್ಲ. ಸಚಿವರು, ಸರ್ಕಾರದ ಮೇಲೆ ಒತ್ತಡ ಹಾಕಬೇಕು” ಎಂದು ಒತ್ತಾಯಿಸಿದರು.

“ಒಳಮೀಸಲಾತಿ ಜಾರಿಗೊಳಿಸದಿದ್ದರೆ, ಹೋರಾಟವನ್ನು ತೀವ್ರಗೊಳಿಸಲಾಗುವುದು. ಜತೆಗೆ ನ್ಯಾಯಾಂಗ ನಿಂದನೆಯ ಮೊಕದ್ದಮೆಯನ್ನೂ ಹೂಡಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್

ಸುನಿಲ್ ಕಂಬೋಗಿ ಮಾತನಾಡಿ, “ದಲಿತ ಶಾಸಕರೂ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು. ಸಮುದಾಯದ ಅನುಕೂಲಕ್ಕಾಗಿ ಒತ್ತಡ ತರಬೇಕು” ಎಂದು ಆಗ್ರಹಿಸಿದರು.‌

ಹನಮಂತ ಚಿಮ್ಮಲಗಿ, ರಾಯಪ್ಪ ಬೀರಕಬ್ಬಿ, ಕಾಂತಿಚಂದ್ರ ಜ್ಯೋತಿ, ಅರುಣ ಲೋಕಾಪುರ, ಸಿದ್ದು ಮಾದರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X