ಬಡವರ ಪರ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಮುಂದಿನ ದಿನಗಳಲ್ಲಿ ಅಹಿಂದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಆಹಿಂದ ರಾಜ್ಯ ಘಟಕದ ಅಧ್ಯಕ್ಷ ಪ್ರಭುಲಿಂಗ ದಂಡಿವನರ ಹೇಳಿದರು.
ಬಾಗಲಕೋಟೆ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತನಿಖೆ ಎದುರಿಸಲು ಸಿದ್ದರಾಮಯ್ಯ ಅವರು ಸಿದ್ಧರಿದ್ದಾರೆ. ಆದರೂ, ರಾಜಕೀಯ ಕಾರಣಕ್ಕೆ ರಾಜೀನಾಮೆ ಕೇಳಲಾಗುತ್ತಿದೆ. ಕೇಂದ್ರವು ರಾಜ್ಯ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.
“ಕೇಂದ್ರ ಸರ್ಕಾರದ ಹಲವು ಸಚಿವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರೆಲ್ಲರೂ ಸಚಿವರಾಗಿ ಮುಂದುವರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿದ್ದಾರೆ. ಬಿಜೆಪಿ ಜೆಡಿಎಸ್ ನಾಯಕರ ಡಬ್ಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ”ಎಂದುರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ʼಶರಣರ ಶಕ್ತಿʼ ಚಿತ್ರದ ಪ್ರದರ್ಶನ ತಡೆ ಹಿಡಿಯಲು ಆಗ್ರಹ
ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಈಟಿ ಮಾತನಾಡಿ, ‘ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿಲುಕಿಸಿರುವುದು ಬೇಸರ ತರಿಸಿದೆ. 40 ವರ್ಷಗಳಿಂದ ರಾಜಕೀಯ ಸಿದ್ದರಾಮಯ್ಯ ಅವರು ಆರೋಪ ಮುಕ್ತರಾಗಿ ಹೊರ ಬರಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಮು ರಾಕುಂಪಿ, ಆದರ್ಶ ನಾಶಿ, ಮಂಜುಳಾ, ಮುತ್ತಣ್ಣ ಇದ್ದರು.