ಬಾಗಲಕೋಟೆ | ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

Date:

Advertisements

ಕುರಿಗಾಹಿಗಳ ಹಿತರಕ್ಷಣೆಗಾಗಿ ಸರ್ಕಾರ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಆಗ್ರಹಿಸಿದರು.

ಬಾಗಲಕೋಟೆ ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಟ್ಟ ಗುಡ್ಡಗಳಲ್ಲಿ ಒಬ್ಬಂಟಿಯಾಗಿ ಹಗಲು ರಾತ್ರಿ ಮಳೆ, ಬಿಸಿಲು ಲೆಕ್ಕಿಸದೆ ತಮ್ಮ ಕಾಯಕವನ್ನೇ ನಂಬಿ ಜೀವನ ನಡೆಸುತ್ತಿರುವ ಕುರಿಗಾಹಿಗಳಿಗೆ ಇತ್ತೀಚಿನ ದಿನಗಳಲ್ಲಿ ರಕ್ಷಣೆಯೇ ಇಲ್ಲದಂತಾಗಿದೆ. ಸರ್ಕಾರ ಕೂಡಲೇ ಅವರ ರಕ್ಷಣೆಗೆ ಕಾಯ್ದೆಯೊಂದನ್ನು ಜಾರಿಗೊಳಿಸಲು ಮುಂದಾಗಬೇಕು” ಎಂದರು.

“2024-25ನೇ ಸಾಲಿನ ಬಜೆಟ್‌ನಲ್ಲಿ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದ್ದರು. ಆದರೆ ಇದುವರೆಗೂ ಮಾಡಿಲ್ಲ. ಇದೇ ರೀತಿ ಮುಂದುವರೆದರೆ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

ಕಳೆದ ಮಾ.9 ರಂದು ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಎಂಬಾತನ್ನು ಕುರಿಗಳ್ಳರು ಕೊಲೆ ಮಾಡಿದ ಹಿನ್ನೆಲೆಯಲ್ಲಿ ಕುರಿಗಾಹಿಗಳ ಆತ್ಮ ರಕ್ಷಣೆಗೆ ಬಂದೂಕು ತರಬೇತಿ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ, ರಾಜ್ಯದಲ್ಲಿ ಪ್ರಥಮ ಬಾರಿಗೆ ಒಂದು ವಾರಗಳ ಕಾಲ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಿದೆ. ಇದೇ ರೀತಿ ಹಿತರಕ್ಷಣಾ ಕಾಯ್ದೆಯೊಂದನ್ನು ಜಾರಿಗೊಳಿಸಿದರೆ ಕುರಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಎಷ್ಟೋ ಕುಟುಂಬಗಳಿಗೆ ರಕ್ಷಣೆ ನೀಡಿದಂತಾಗುತ್ತದೆ” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಬಾಗಲಕೋಟೆ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ಮುಖಂಡ ಕಾಶಿನಾಥ ಹುಡೇದ, ಯಲ್ಲಪ್ಪ ಹೆಗಡೆ, ಬಸವರಾಜ ಧರ್ಮಂತಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ, ಈರಪ್ಪ ಹಂಚಿನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X