ಬಾಗಲಕೋಟೆ | ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪಥೇಶ್ವರ ಇಮ್ಮಡಿ ಪುಲಿಕೇಶಿ ಹೆಸರಿಡಲು ಆಗ್ರಹ

Date:

Advertisements

“ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಬೇಕು” ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷರು ರಾಹುಲ್ ಶೆಟ್ಟರ ಆಗ್ರಹಿಸಿದರು.

ಬಾಗಲಕೋಟಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, “ಆರು ವರ್ಷಗಳ ನಿರಂತರ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರ ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಘೋಷಣೆ ಮಾಡಿ, ಸ್ಥಾಪನೆಗೆ 450 ಕೋಟಿ ರೂಪಾಯಿ ಅನುದಾನ ನೀಡಲು ಅನುಮೋದನೆ ನೀಡಿದ್ದು ಅತೀವ ಸಂತಸ ತಂದಿದೆ” ಎಂದರು.

“ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆದ ಎಲ್ಲ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದು ಎಲ್ಲ ಅಡೆತಡೆಗಳನ್ನು ಎದುರಿಸಿ ಮುನ್ನಡೆದದ್ದು ಇಂದು ಸಾರ್ಥಕತೆಯ ಆನಂದ ತಂದಿದೆ. ಎಲ್ಲ ಹೋರಾಟಗಳಲ್ಲಿ ಭಾಗವಹಿಸಿದ ಅಸಂಖ್ಯಾತ ಕನ್ನಡ ಸೇನಾನಿಗಳಿಗೆ, ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಬಾಗಲಕೋಟೆಯ ಜನತೆಗೆ, ರಾಜ್ಯ ಸರ್ಕಾರಕ್ಕೆ, ಬಾಗಲಕೋಟೆ ಶಾಸಕರಾದ ಸನ್ಮಾನ್ಯ ಹೆಚ್. ವಾಯ್. ಮೇಟಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ” ಎಂದರು.

ಮುಂದಿನ ದಿನಗಳಲ್ಲಿ ಆರಂಭವಾಗುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಮಹಾರಾಜರ ಹೆಸರಿಡಬೇಕು ” ರಾಜ್ಯ ಸರ್ಕಾರವನ್ನು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X