ಬಾಗಲಕೋಟೆ | ರೈತರಿಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಿ: ಮಹಾಂತೇಶ ಹಟ್ಟಿ

Date:

ರೈತರ ಜಮೀನಿನ ಅವಶ್ಯಕತೆಗನುಗುಣವಾಗಿ ಬಿತ್ತನೆಬೀಜ, ಗೊಬ್ಬರ, ಕೀಟನಾಶಕಗಳನ್ನು ವಿತರಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ ವಿತರಕರಿಗೆ ಸೂಚಿಸಿದರು.

- Advertisement -

ನವನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆದ ವಿತರಕರರು ಹಾಗೂ ಮಾರಾಟಗಾರರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಜಿಲ್ಲೆಯಲ್ಲಿ ಒಟ್ಟು 3,10,599 ಹೆಕ್ಟೇರ್‌ಗಳಲ್ಲಿ ಹಂಗಾಮಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಪೈಕಿ ಈಗಾಗಲೇ ಸುಮಾರು 1,02,000 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದ್ದು, ಶೇ.30ರಷ್ಟು ಬಿತ್ತನೆಯಾಗಿದೆ.

“ರೈತ ಸಂಪರ್ಕ ಕೇಂದ್ರಗಳಲ್ಲಿ ಅವಶ್ಯಕ ಬಿತ್ತನೆಬೀಜ ಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಸರು, ತೊಗರಿ ಉದ್ದು, ಸೋಯಾ, ಅವರೆ, ಸಜ್ಜೆ ಸೂರ್ಯಕಾಂತಿ, ಮೆಕ್ಕೆಜೋಳ ಬೆಳೆಗಳ ಒಟ್ಟು 2,170 ಕ್ವಿಂಟಲ್‌ನಷ್ಟು ಬಿತ್ತನೆಬೀಜ ಸಂಗ್ರಹ ಮಾಡಲಾಗಿದೆ. ರೈತರಿಗೆ ವಿತರಣೆ ಕಾರ್ಯ ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ ಅವಶ್ಯಕ ರಸಗೊಬ್ಬರ ದಾಸ್ತಾನು ಇದ್ದು, ರೈತ ಬಾಂಧವರು ಒಂದು ಮತ್ತು ಎರಡು ಪೋಷಕಾಂಶ ಇರುವ ಗೊಬ್ಬರವನ್ನು ಹಾಗೂ ಕಾಂಪ್ಲೆಕ್ಸ್ ರಸಗೊಬ್ಬರ ಬಳಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಸ್ಕಿಜೋಫ್ರೇನಿಯಾವನ್ನು ಸಕಾಲದಲ್ಲಿ ಗುರುತಿಸಿ ಚಿಕಿತ್ಸೆ ಪಡೆದಲ್ಲಿ ತೊಂದರೆಯಿಲ್ಲ: ಡಾ ಭಾರತಿ

ರೈತ ಬಾಂಧವರು ಅಧಿಕೃತ ಕೃಷಿ ಮಾರಾಟಗಾರರದಿಂದ ಖರೀದಿ ಮಾಡಿ ರಶೀದಿ ಪಡೆಯಬೇಕು. ಅನಧಿಕೃತ, ಕಲಬೆರಕೆ, ನಕಲಿ ಕೃಷಿ ಪರಿಕರ ಮಾರಾಟ ಕಂಡುಬಂದಲ್ಲಿ ರೈತ ಕರೆ ಕೇಂದ್ರ 18004253553ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.

ವೇದಿಕೆಯ ಮೇಲೆ ಜಿಲ್ಲಾ ಕಾರ್ಯದರ್ಶಿ ಪ್ರಭು ಇದ್ದಲಗಿ, ಜಿಲ್ಲಾ ಕೃಷಿ ಉಪನಿರ್ದೇಶಕ ಆರ್ ಎಂ ರೂಡಗಿ ಹಾಜರಿದ್ದರು. ಸಭೆಯಲ್ಲಿ ಜಿಲ್ಲೆಯ 50ಕ್ಕೂ ಹೆಚ್ಚು ವಿತರಕರು, ಮತ್ತು 30ಕ್ಕೂ ಹೆಚ್ಚು ಕೆಮಿಕಲ್ ಡಿಸ್ಟ್ರಿಬ್ಯೂಟರ್ಸ್‌, ಸಂಘದ ಸದಸ್ಯರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...