ಬಾಗಲಕೋಟೆ | ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೆ ಟಿಕೆಟ್‌ ನೀಡುವಂತೆ ಆಗ್ರಹ

Date:

ಬಾಗಲಕೋಟೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತರುಗಳಿಗೆ ಕಾಂಗ್ರೆಸ್ ನಿಷ್ಠಾವಂತರಿಗೆ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಭ್ಯರ್ಥಿಗಳಿಗೆ ಬಾಗಲಕೋಟೆಗೆ ಸ್ವ ಜಿಲ್ಲೆಯವರಿಗೆ ಟಿಕೆಟ್ ಕೊಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಗಂಗೂರ್  ಆಗ್ರಹಿಸಿದರು.

- Advertisement -

ಬಾಗಲಕೋಟೆ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

“ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ವಿ ಕಾಶಪ್ಪನವರಿಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ಕೊಡಬೇಕು. ಈಗಾಗಲೇ ಜಿಲ್ಲೆಯಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಕಟ್ಟಿ ಜಿಲ್ಲೆಯಲ್ಲಿ ಹಿಂದುಳಿದ, ದಲಿತರ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪರ ಹಾಗೂ ರೈತರ ಪರವಾಗಿ ಹಗಲು ಇರುಳು ಶ್ರಮವಹಿಸಿ ಅವರ ಕುಂದುಕೊರತೆಗಳಿಗೆ ಸ್ಪಂದಿಸುತ್ತಿರುವ ವೀಣಾ ಕಾಶಪ್ಪನವರಿಗೆ ಈ ಬಾರಿಯ ಲೋಕಸಭಾ ಟಿಕೆಟ್ ಕೊಡಬೇಕು. ಅವರ ಗೆಲುವಿಗಾಗಿ ಹಾಗೂ ಜಿಲ್ಲೆಯ ಅಭಿವೃದ್ದಿಗಾಗಿ ವಿವಿಧ ಸಂಘಟನೆಗಳು ಒಗ್ಗಟಾಗಿ ಅವರ ಪರವಾಗಿ ನಿಲ್ಲುತ್ತೇವೆ. ಅಭಿವೃದ್ದಿಯ ಹಾಗೂ ಜಿಲ್ಲೆಯ ಬೆಳವಣಿಗೆಯ ಬಗ್ಗೆ ಅಪಾರ ಕನಸು ಕಂಡಿರುವ ವ್ಯಕ್ತಿಗೆ ಟಿಕೆಟ್ ನೀಡಬೇಕು” ಎಂದು ಒತ್ತಾಯಿಸಿದರು.

“ವೀಣಾ ವಿ ಕಾಶಪ್ಪನವರಿಗೆ ಎಂಪಿ ಟಿಕೆಟ್ ನೀಡಬೇಕೆನ್ನಲು ಹಲವಾರು ಕಾರಣಗಳಿವೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜಿಲ್ಲೆಯ ತುಂಬೆಲ್ಲ ಗ್ರಾಮ ವಾಸ್ತವ್ಯ ಮಾಡಿ ಜನರ ನಾಡಿಮಿಡಿತ ಅರಿತ ಮೊದಲ ಅಧ್ಯಕ್ಷೆ ಅವರು. ಕಾಂಗ್ರೆಸ್‌ನಿಂದ ಜಿಲ್ಲಾ ಅಧ್ಯಕ್ಷೆ ಆದರೂ ಕೂಡಾ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಪ್ರಮಾಣ ಪತ್ರ ಪಡೆದದು ಹೆಮ್ಮೆಯ ವಿಷಯ” ಎಂದು ಹೇಳಿದರು.

“ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡು ಗಂಡ, ಮಕ್ಕಳು, ಸಂಸಾರವೆಂದು ಮನೆಯಲ್ಲಿ ಕೂರದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲೆಯ ಪ್ರತಿ ಹಳ್ಳಿಗೂ ಭೇಟಿ ನೀಡಿ ಜನರ ಕಷ್ಟ ಸುಖದಲ್ಲಿ ಬಾಗಿಯಾದ ನಾಯಕಿ ಅಚರು” ಎಂದು ಶ್ಲಾಘಿಸಿದರು.

“ಒಂದು ಬಾರಿ ಎಂಎಲ್‌ಎ ಆದರೆ ಸಾಕು ಅವರನ್ನು ಹಿಡಿಯೋರು ಯಾರೂ ಇಲ್ಲದಂತೆ ಮೆರೆಯುವ ನಾಯಕ/ನಾಯಕಿಯರ ಮಧ್ಯೆ, ಮಾವ ಮಾಜಿ ಸಚಿವ, ಗಂಡ ಎಂಎಲ್‌ಎ, ತಾನು ಕೆಪಿಸಿಸಿ ಮಹಿಳಾ ಉಪಾಧ್ಯಕ್ಷೆ ಹಾಗೂ ತವರು ಮನೆಯವರೂ ಕೂಡ ಶ್ರೀಮಂತ ಮನೆತನ ಆದರೂ ಕೂಡ ಒಂಚೂರು ಅಹಂಕಾರ ಇಲ್ಲದೆ ಚಿಕ್ಕವರ ಜೊತೆಗೆ ಚಿಕ್ಕವರಾಗಿ ದೊಡ್ಡವರ ಜೊತೆಗೆ ದೊಡ್ಡವರಾಗಿ ಎಲ್ಲರೊಟ್ಟಿಗೆ ನಗು ನಗುತ ಇರುವ ಮನಸ್ಸುಳ್ಳ ನಾಯಕಿ. ಅಂತಹವರಿಗೆ ಟಿಕೆಟ್‌ ನೀಡಬೇಕಾಗಿರುವುದು ಅಗತ್ಯವಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ: ಸಚಿವ ಕೆ.ಎನ್ ರಾಜಣ್ಣ

“ಅಧಿಕಾರ ಸಿಕ್ಕಿದರೆ ಹೇಗೆಲ್ಲ ದುಡ್ಡು ಮಾಡಬಹುದೆಂದು ಯೋಚಿಸುವ ನಾಯಕರ ಮಧ್ಯ ಯುವ ಪೀಳಿಗೆಯ ಭವಿಷ್ಯಕ್ಕೆ ಏನೆಲ್ಲ ಸಹಾಯ ಮಾಡಬಹುದೆಂದು ಯೋಚಿಸಿ ಸ್ವಂತ ಹಣದಲ್ಲಿ ವಿವಿಕೆ ಫೌಂಡೇಷನ್ ಮೂಲಕ ಯುವ ಜನರ ಭವಿಷ್ಯ ರೂಪಿಸುತ್ತಿರುವ ನಾಯಕಿ. ʼನಾನು, ನನ್ನ ಹೆಂಡತಿ, ಗಂಡ, ತಮ್ಮ, ನಾದನಿ, ಚಿಕ್ಕಪ್ಪ, ಚಿಕ್ಕಮ್ಮ, ಮಾವ, ಅಳಿಯ ಹೀಗೆ ಕುಟುಂಬದವರಿಗೆ ಅಧಿಕಾರ ಸಿಗಬೇಕೆಂದು ದುರಾಸೆ ಇರುವ ನಾಯಕರ ಮಧ್ಯ ನಿಷ್ಠಾವಂತ ಕಾರ್ಯಕರ್ತರಿಗೆ ಅಧಿಕಾರ ಕೊಡಿಸಿ ಬೆಳೆಸುವ ಗುಣವುಳ್ಳ ನಾಯಕಿ. ಹಾಗಾಗಿ ಅಧಿಕಾರ ಇಲ್ಲದಿದ್ದರೂ ಕೂಡಾ ಸದಾ ಜನರೊಂದಿಗೆ ನಿಂತ ನಾಯಕಿಗೆ ಅವಕಾಶ ಸಿಗಬೇಕೆಂಬುದು ಕಾರ್ಯಕರ್ತರ ಆಸೆ. ಹಾಗಾಗಿ ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರಿಗೆ ಅವಕಾಶ ನೀಡುತ್ತದೆಯೆಂದು ನಮಗೆಲ್ಲ ಭರವಸೆ ಇದೆ” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...