ಬಾಗಲಕೋಟೆ | ಭೂಸ್ವಾಧೀನ ಹಿಂಪಡೆಯುವಂತೆ ರೈತರ ಒತ್ತಾಯ

Date:

Advertisements

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಜೆ.ಟಿ ಪಾಟೀಲ ಮನವಿ ಸಲ್ಲಿಸಿದ್ದಾರೆ.

ಶಾಸಕರಾಗಿ ಆಯ್ಕೆಯಾದ ಬಳಿಕ ಹಲಕುರ್ಕಿ ಗ್ರಾಮದ ನೂರಾರು ರೈತರು ಪಾಟೀಲ ಅವರನ್ನು ಬಾಗಲಕೋಟೆ ಐಬಿಯಲ್ಲಿ ಭೇಟಿಯಾಗಿ ತಮ್ಮ ಗ್ರಾಮದ ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸಬೇಕೆಂದು ಮನವಿ ಸಲ್ಲಿಸಿದ್ದರು. ಈ ಮನವಿ ಸ್ವೀಕರಿಸಿದ ಶಾಸಕ ಜೆ ಟಿ ಪಾಟೀಲ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಖುದ್ದು ಭೇಟಿಯಾಗಿ ಹಲಕುರ್ಕಿ ರೈತರ ಭಾವನೆಗಳನ್ನು ಅವರ ಗಮನಕ್ಕೆ ತಂದು ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸಲು ವಿನಂತಿಸುವುದಾಗಿ ಭರವಸೆ ನೀಡಿದ್ದರು.

ಆರು ತಿಂಗಳುಗಳ ಹಿಂದೆ ರೈತರು ಭೂಸ್ವಾಧೀನ ವಿರುದ್ಧ ಹೋರಾಟ ಆರಂಭಿಸಿದಾಗ ಜೆ‌ ಟಿ ಪಾಟೀಲ ಅವರು ಮೊದಲ ದಿನದಿಂದಲೂ ರೈತರ ಜತೆಗಿದ್ದು ಬೆಂಬಲ ವ್ಯಕ್ತಪಡಿಸಿದ್ದರು. ಅಂದು ವಿರೋಧ ಪಕ್ಷದ ನಾಯಕರಾಗಿದ್ದ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಲಕುರ್ಕಿ ರೈತರು ಬಾದಾಮಿಯಲ್ಲಿ ಭೇಟಿಯಾಗಿ ಮನವಿ ಕೊಟ್ಟಾಗ ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಭರವಸೆ ನೀಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಮಗ್ರ ಅಭಿವೃದ್ಧಿಗೆ 21 ಅಂಶಗಳ ಪ್ರಸ್ತಾವನೆ ಸಲ್ಲಿಕೆ

ಭೂಸ್ವಾಧೀನ ಪ್ರಕ್ರಿಯೆ ರದ್ದು ಪಡಿಸುವಂತೆ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ್ದರು. ಈಗ ಅವರದೇ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನಾಯಕರ ಮೇಲೆ ಭರವಸೆ ಇಟ್ಟು ಹಲಕುರ್ಕಿ ಗ್ರಾಮದ ಮತದಾರರು ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲಕುರ್ಕಿ ಗ್ರಾಮದ ರೈತರು ಭೂಸ್ವಾಧೀನ ಪ್ರಕ್ರಿಯೆ ರದ್ದಾಗುತ್ತದೆ. ನೆಮ್ಮದಿಯ ನಿಟ್ಟುಸಿರು ಬಿಡುವ ದಿನಗಳು ಹತ್ತಿರದಲ್ಲಿವೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X