ಬಾಗಲಕೋಟೆ | ಬಾಗಿಲಲ್ಲಿ ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ; ಹೊತ್ತಿ ಉರಿದ ಮನೆ

Date:

ಅಕ್ಟೋಬರ್ 20ರೀಂದ ದೀಪಾವಳಿ ಆರಂಭವಾಗಲಿದೆ. ಆದರೆ, ದೀಪಾವಳಿ ಮುನ್ನವೇ ಪಟಾಕಿ ಸೇರಿದಂತೆ ಬೆಂಕಿ ಅವಘಡಗಳು ವರದಿಯಾಗುತ್ತಿವೆ. ಮನೆ ಬಾಗಿಲಿನಲ್ಲಿ ಹಚ್ಚಿದ್ದ ದೀಪದಿಂದಾಗಿ ಇಡೀ ಮನೆಯೇ ಹೊತ್ತಿ ಉರಿದು, 7 ಮಂದಿಗೆ ಗಾಯಗಳಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಗದ್ದನಕೇರಿ ಕ್ರಾಸ್‌ನಲ್ಲಿರುವ ಉಮೇಶ್‌ ಮೇಟಿ ಎಂಬವರ ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೀಪಾವಳಿ ಆಚರಣೆಗಾಗಿ ಉಮೇಶ್‌ ಮೇಟಿ ಅವರಿಗೆ ಸೇರಿದ ಕಟ್ಟಡದ ಮನೆಯೊಂದರಲ್ಲಿ ರಾಜೇಂದ್ರ ತಪಶೆಟ್ಟಿ ಎಂಬವರ ಕುಟುಂಬ ಬಾಡಿಗೆಗೆ ವಾಸವಾಗಿತ್ತು. ರಾಜೇಂದ್ರ ಅವರ ಕುಟುಂಬಸ್ಥರು ಮನೆ ಬಾಗಿಲಿನಲ್ಲಿ ದೀಪ ಹಚ್ಚಿಟ್ಟಿದ್ದರು. ದೀಪದ ಪಕ್ಕದಲ್ಲಿ ಬಿದ್ದಿದ್ದ ವಾಹನದ ಗ್ರೀಸ್‌ಗೆ ದೀಪದ ಬೆಂಕಿ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಬೆಂಕಿ ವ್ಯಾಪಿಸಿದ ಪರಿಣಾಮ, ಮನೆಯ ಬಳಿಯಿದ್ದ ಎರಡು ಬೈಕ್ ಸುಟ್ಟುಹೋಗಿವೆ. ಮನೆಯೂ ಹೊತ್ತಿ ಉರಿದಿದೆ. ಮನೆಯಲ್ಲಿದ್ದ ಸಿಲಿಂಡರ್ ಕೂಡ ಸ್ಪೋಟಗೊಂಡಿದ್ದು, ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಬೆಂಕಿಹೊತ್ತಿಕೊಂಡ ಕೂಡಲೇ ಮನೆಮಂದಿ ಹೊರಗೆ ಓಡಿಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ, ಸಣ್ಣ-ಪುಟ್ಟ ಗಾಯಗಳಾಗಿವೆ.

ಸ್ಥಳಕ್ಕೆ ಬಾಗಲಕೋಟೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ಶಮನ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...