ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಎಂಬ ಗ್ರಾಮದ ಬಾಲಕಿಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ದಳ ಕಾರ್ಯಕರ್ತರು ಬಾಗಲಕೋಟೆ ಜಿಲ್ಲೆ ಜಮಖಂಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದರು.
ಸಂಘಟನೆಯ ತಾಲೂಕು ಅಧ್ಯಕ್ಷ ಹನಮಂತ ಯಮಗಾರ ಮಾತನಾಡಿ, “ಮೊನ್ನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಎಂಬ ಗ್ರಾಮದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಇದು ಘೋರ ಅಪರಾಧವಾಗಿದ್ದು, ಬಾಲಕಿಯ ಕುಟುಂಬಕ್ಕೆ ₹1 ಕೋಟಿ ಪರಿಹಾರ ಧನ ನೀಡಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಣಿಪುರ ಹಿಂಸಾಚಾರ ತಡೆಯುವಂತೆ ಆಗ್ರಹ
“ಅತ್ಯಾಚಾರಿಯ ಆಸ್ತಿಯನ್ನು ಜಪ್ತಿ ಮಾಡಿ ಬಾಲಕಿಯ ಕುಟುಂಬಕ್ಕೆ ನೀಡಬೇಕು. ಬಾಲಕಿಯ ಕುಟುಂಬಕ್ಕೆ ಕಾನೂನಿನ ನೆರವು ನೀಡಿ, ಅತ್ಯಾಚಾರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಚಿದಾನಂದ ಬಬಲಾದೀ, ಪರಶು ಚಿಗರಿ, ಆಕಾಶ್ ಬೀಳಗಿ, ಈಶ್ವರ ದಳವಾಯಿ ಹಾಗೂ ವಿದ್ಯಾರ್ಥಿಗಳು ಇದ್ದರು.