ಬಾಗಲಕೋಟೆ | ಸರ್ಕಾರದಿಂದ ಕುರಿಗಾಹಿಗಳ ಹಿತರಕ್ಷಣೆಗೆ ಕಾಯ್ದೆ: ಕುರುಬರ ಪದವೀಧರರ ಸಂಘ ಸ್ವಾಗತ

Date:

Advertisements

ರಾಜ್ಯ ಸರ್ಕಾರವು ಕಳೆದ ಮುಂಗಾರು ಅಧಿವೇಶನದಲ್ಲಿ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣೆಗೆ ಮಂಡಿಸಿರುವ ಕಾಯ್ದೆ ಮಸೂದೆಗೆ ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘ ತೀವ್ರ ಸಂತೋಷ ವ್ಯಕ್ತಪಡಿಸಿ ಸ್ವಾಗತಿಸಿದೆ.

ಬಾಗಲಕೋಟೆ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ನಾಯಕರಾದ ಯಂಕಣ್ಣ ಬಬಲಾದಿ ಹಾಗೂ ಹಣಮಂತ ಯಮಗಾರ ಮಾತನಾಡಿ, ‘ರಾಜ್ಯದ ನಾನಾ ಭಾಗಗಳಲ್ಲಿ ಕುರಿಗಾಹಿಗಳು ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ಹೊಸದಲ್ಲ. ಆದರೆ ಇಂತಹ ಅನಾಹುತಗಳನ್ನು ತಡೆಯಲು ಪರಿಣಾಮಕಾರಿ ಕಾನೂನು ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿತ್ತು. ಈಗ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕುರಿಗಾಹಿಗಳ ಹಕ್ಕುಗಳ ರಕ್ಷಣೆಗೆ ಮಸೂದೆ ಮಂಡಿಸಿರುವುದು ಸಮುದಾಯಕ್ಕೆ ದೊಡ್ಡ ನೆರವಾಗಲಿದೆ’ ಎಂದು ಹೇಳಿದರು.

‘ಈ ಹೋರಾಟಕ್ಕೆ ಧ್ವನಿ ನೀಡಿದ ಹಾಗೂ ಮಸೂದೆ ಜಾರಿಗೆ ತೊಡಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಶುಸಂಗೋಪನಾ ಸಚಿವ ಕೆ ವೆಂಕಟೇಶ ಹಾಗೂ ಶಾಸಕ ಭೀಮಸೇನ ಚಿಮ್ಮನಕಟ್ಟಿಯವರ ಕಾರ್ಯ ಶ್ಲಾಘನೀಯ, ಕುರಿಗಾಹಿ ಸಮುದಾಯ ಸದಾ ಅವರ ಕೃತಜ್ಞರಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಕೊಪ್ಪಳ | ಸೆ.15ವರೆಗೆ ‘ಡಿಜಿಟಲ್ ಸ್ವಾತಂತ್ರ್ಯ ಜಾಗೃತಿ’ ಅಭಿಯಾನ; ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ ಚಾಲನೆ

‘ಸರ್ಕಾರದ ಈ ನಿರ್ಧಾರದಿಂದ ಸಾಂಪ್ರದಾಯಿಕ ಕುರಿಗಾಹಿಗಳ ಬದುಕಿಗೆ ಕಾನೂನು ಬಲ ದೊರಕಿದ್ದು, ಇದು ಸಮಾಜದ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ’ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಹಿರಿಯರು ಶಿವಲಿಂಗ ನಿಂಗನೂರ, ಬಿಲ್ಲಾರ, ರಾಘವೇಂದ್ರ ಯಾದಗಿರಿ, ತಿಪ್ಪಣ್ಣ ದೇವರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X