ಬಾಗಲಕೋಟೆ | ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿ ಕಾಮಗಾರಿಗೆ ಭೂಮಿಪೂಜೆ

Date:

Advertisements

ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರದ ಆಗಸ್ಟ್ ನಗರದ ಕಂದಗಲ್ ರಸ್ತೆಯಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿ‌ ನಿರ್ಮಾಣಕ್ಕೆ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಭೂಮಿ ಪೂಜೆ ನೆರವೇರಿಸಿದರು.

ಪೂಜೆ ನೆರವೇರಿಸಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶದ ಮಹಿಳಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಬಾಲಕಿಯರ ವಸತಿ ನಿಲಯವನ್ನು ಪ್ರಾರಂಭಿಸಿದ್ದೆವು. ಅದರಂತೆ ಹೆಚ್ಚುವರಿ ಕೊಠಡಿ ಹಾಗೂ ನವೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದೇವೆ” ಎಂದು ಹೇಳಿದರು.

“ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಮಾಡಲು ಈ ಕೊಠಡಿಗಳು ಅನುಕೂಲವಾಗಲಿವೆ. ದಲಿತ ಸಮುದಾಯದ ವಿದ್ಯಾರ್ಥಿನಿಯರು ಹಾಸ್ಟೆಲ್‌ಗಳ ಕೊರತೆಯಿಂದ ಅವರ ಶಿಕ್ಷಣ ಕುಂಠಿತಗೊಳ್ಳುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಸತಿನಿ ಲಯಗಳು ಬಹುಮುಖ್ಯ ಪಾತ್ರ ವಹಿಸಲಿವೆ. ದಲಿತ ಸಮುದಾಯದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮುಂದುವರೆಸಿ ಸಮಾಜದಲ್ಲಿ ಉನ್ನತ ಕೊಡುಗೆ ನೀಡಲು ಮುಂದಾಗಬೇಕು” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ಕಾಂಗ್ರೆಸ್ ಮುಖಂಡ ಶರಣಪ್ಪ ಅಮದಿಹಾಳ, ಜಬ್ಬಾರ, ಕಲಬುರಗಿ, ಮೆಹಬೂಬ್ ಸರಕಾವಸ್, ವಿಠ್ಠಲ್ ಜಕ್ಕಾ, ಸುರೇಶ್ ಜಂಗ್ಲಿ, ಅಮೃತ್ ಬಿಜ್ಜಲ್, ಮೌಲೇಶ್ ಬಂಡಿವಡ್ಡರ್, ಎಂ ಎಚ್ ಕಟ್ಟಿಮನಿ, ಮಹೆಬೂಬ್ ಗದ್ವಾಲ್, ಮಲ್ಲು ಮಡಿವಾಳರ್, ಹನುಮನಾಳ ಮಹಾಂತೇಶ, ಟಿಪ್ಪು ಸುಲ್ತಾನ್ ಭಂಡಾರಿ, ರಾಜು ಬನ್ನಿಗೋಳ ಹಾಗೂ ನಗರಸಭೆ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರು, ಮಹಿಳಾ ಕಾಂಗ್ರೆಸ್ ಪಕ್ಷದ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Букеты из тюльпанов на 8 марта — это идеальный способ выразить свои чувства и сделать этот день незабываемым. [url=https://cvety8marta.ru/]Букет из тюльпанов на 8 марта[/url].

    Букеты из тюльпанов на 8 марта — это отличный способ выразить свою любовь и уважение к женщинам. Обязательно дополните букет красивой упаковкой и поздравительной открыткой.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X