ಬಾಗಲಕೋಟೆ | ಘೋಷಣೆಯಲ್ಲೇ ಉಳಿದ ವೈದ್ಯಕೀಯ ಕಾಲೇಜು; ಅನುದಾನ ನೀಡಲು ಆಗ್ರಹ

Date:

Advertisements

ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, “ಬಾಗಲಕೋಟೆ ಜಿಲ್ಲೆಗೆ 2014-15ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ವೈದ್ಯಕೀಯ ಮಹಾವಿದ್ಯಾಲಯ ಘೋಷಣೆ ಮಾಡಿತ್ತು. ನಂತರ ಅಧಿಕಾರಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜಿಗೆ ಯಾವುದೇ ಅನುದಾನ ಬಿಡುಗಡೆ ಮಾಡಲಿಲ್ಲ. ಈ ಕಾರಣದಿಂದ ವೈದ್ಯಕೀಯ ಮಹಾವಿದ್ಯಾಲಯದ ನನೆಗುದಿಗೆ ಬಿದ್ದಿತು” ಎಂದು‌ ಅಸಮದಾನ ವ್ಯಕ್ತಪಡಿಸಿದರು.

“ಚುನಾವಣೆ ಪ್ರಚಾರದ ಸಂಧರ್ಭದಲ್ಲಿ ಮುಖ್ಯಮಂತ್ರಸಿ ಸಿದ್ದರಾಮಯ್ಯ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುದಾನ ಒದಗಿಸಿ ಗುದ್ದಲಿ‌ ಪೂಜೆಗೂ ಬರ್ತೀನಿ, ಹಾಗೆಯೇ ಉದ್ಘಾಟನೆಗೂ ನಾನೇ ಬರ್ತೀನಿ ಎಂದು ಭರವಸೆ ನೀಡಿದ್ದು ಮರೆತು ಹೋಯಿತೇ? ನಿಮಗೆ ರಾಜಕೀಯ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಗೆ ನೀವು ಮಾಡುತ್ತಿರುವ ಪ್ರತ್ಯುಪಕಾರ ಏನು? ನಿಜವಾಗಿಯೂ ನೀವು ನುಡಿದಂತೆ ನಡೆದಿದ್ದೀರಾ” ಎಂದು ಪ್ರಶ್ನಿಸಿದರು.

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅನುದಾನ ಒದಗಿಸುತ್ತೇವೆ’ ಎಂದು ಭರವಸೆ ನೀಡಿದ್ದರು. ಬಾಗಲಕೋಟೆ ಜನರ ಆಶೀರ್ವಾದದಿಂದಲೂ ಕರ್ನಾಟಕದಲ್ಲಿ ನಿಮ್ಮದೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ, 2023-24 ಬಜೆಟ್‌ನಲ್ಲಿ ಬಾಗಲಕೋಟೆ ವೈದ್ಯಕೀಯ ಕಾಲೇಜಿಗೆ ಅನುದಾನ ಬಿಡುಗಡೆ ಮಾಡದೆ ಜಿಲ್ಲೆ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿದ್ದೀರಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಕೂಡಲೇ ಗಮನಹರಿಸಿ ಪ್ರೊ. ನಂಜುಂಡಪ್ಪ ವರದಿಯಂತೆ ಹಿಂದುಳಿದಿರುವ ಮತ್ತು ಮುಳುಗಡೆಯಿಂದ ಬಾಧಿತವಾಗಿರುವ ಬಾಗಲಕೋಟೆ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಾದ ಬಾಗ್ಯ ಬೇಟಗೇರಿ, ರಾಜೇಶ್ವರಿ, ಹಿರೇಮಠ, ಬಸವರಾಜ್ ಅಂಬಿಗೇರ, ಶಿವಾನಂದ ಲೆಕ್ಕನ್ನವರ, ರಾಚಪ್ಪ ಸನದಿ, ದಾದಾಪೀರ್ ಶಿವಳ್ಳಿ, ಹುಚ್ಚಪ್ಪ ಯಡಹಳ್ಳಿ, ಮಂಜುನಾಥ ಯಡಹಳ್ಳಿ, ಹಸನ್ ಕಲಕ‌ಬಂಡಿ ಹಾಗೂ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

Download Eedina App Android / iOS

X