ಬಾಗಲಕೋಟೆ | ಆಧುನಿಕ ಸೌಲಭ್ಯ ಹೊಂದಿರುವ ಸರ್ಕಾರಿ ಶಾಲೆಗೆ ಭೂಸ್ವಾಧೀನಾಧಿಕಾರಿ ಭೇಟಿ

Date:

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸಮೀಪದ ಹಿಪ್ಪರಗಿಯ ʼನಮ್ಮೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆʼಗೆ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧಿನಾಧಿಕಾರಿ ಸಾಜಿಜ ಅಹ್ಮದ‌ ಮುಲ್ಲಾ ಭೇಟಿ ನೀಡಿ ಶಾಲೆಗಾಗಿ ಶ್ರಮಿಸಿದವರನ್ನು ಶ್ಲಾಘಿಸಿದರು.

- Advertisement -

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಓದುವಾಗ ಮೂಲಭೂತ ಸೌಕರ್ಯಗಳ ಕೊರತೆ ಇತ್ತು, ಈ ಶಾಲೆಯ ಮಕ್ಕಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ ಮತ್ತು ಆಟದ ಮೈದಾನ ಇರುವುದು ನನಗೆ ಹರ್ಷ ತಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಂದುವರಿದು, ಈ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಿದ ಗ್ರಾಮದ ಹೆಮ್ಮೆಯ ಯುವ ಪಡೆ ಹಾಗೂ ಗ್ರಾಮ ಪಂಚಾಯತಿ ಮತ್ತು ಊರಿನ ಗುರುಹಿರಿಯರಿಗೆ ಕೃತಘ್ನತೆ ಸಲ್ಲಿಸಿದ ಅವರು, ಈ ಎಲ್ಲ ಆಧುನಿಕ ಸೌಲಭ್ಯಗಳ ಸದುಪಯೋಗಪಡೆದುಕೊಂಡು ಸರಿಯಾದ ದಿಕ್ಕಿನಲ್ಲಿ ಅಧ್ಯಯನ ಮಾಡಿ, ಜೀವನದಲ್ಲಿ ದೊಡ್ಡ ಸಾಧನೆ ಮಾಡಬೇಕೆಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಶಾಲೆಯಲ್ಲಿ ವಿಶೇಷವಾಗಿ ಉಚಿತವಾಗಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸಿರುವುದನ್ನು ಶ್ಲಾಘಿಸಿದರು. ಇಡೀ ಜಿಲ್ಲೆಯಲ್ಲಿಯೇ ಅತ್ಯಂತ ಉನ್ನತ ಗುಣಮಟ್ಟದ ಶಿಕ್ಷಣವನ್ನು ಈ ಶಾಲೆಯು ನೀಡಲಾಗುತ್ತಿದೆ ಎಂದು ಶಾಲೆಯನ್ನು ಪ್ರಶಂಶಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಗುರುಗಳಾದ ಎಸ್.ಬಿ. ಕುಂಬಾರ ಹಾಗೂ ಶಾಲೆಯ ಸಿಬ್ಬಂದಿ, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಮಹಾದೇವ ಮಂಟೂರ, ಅಣ್ಣಪ್ಪ ಪಾಟೀಲ, ಮಹಾದೇವ ಕಾಂಬಳೆ, ಗ್ರಾಮದ ಪಿಡಿಒ ಅಧಿಕಾರಿಗಳಾದ ಬಸಲಿಂಗ ವಾಲಿ, ಕಂದಾಯ ನಿರೀಕ್ಷಕರಾದ ಪಿ.ಆರ್.ಮಠಪತಿ ಹಾಗೂ ಗ್ರಾಮ ಆಡಳಿತಾಧಿಕಾರಿ ಎ.ಎಸ್. ಬಿರಾದಾರ ಹಾಗೂ ಊರಿನ ಯುವಕರು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...