ಲಾರಿಗೆ ಬೆಂಕಿ ತಗುಲಿದ್ದು, ಸಂಭವಿಸಬಹುದಾಗಿದ್ದ ದೊಡ್ಢ ಅನಾಹುತವನ್ನು ಕೆಎಸ್ಆರ್‌ಟಿಸಿ ನಿರ್ವಾಹಕಿಯು ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬಾಗಲಕೋಟೆಯಿಂದ ಜಲ್ಲಿ ತುಂಬಿಕೊಂಡು ತೋರಣಗಲ್ ಕಡೆಗೆ ಹೊರಟಿದ್ದ ಲಾರಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ಶಹಾಪುರ-ಇಳಕಲ್ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ಲಾರಿಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಬಸ್ ನಿರ್ವಾಹಕಿ ಶರಣಮ್ಮ ಅವಘಡದಿಂದ ಚಾಲಕನನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ನ್ಯಾ. ಉಂಡಿ ಮಂಜುಳಾ ಶಿವಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ; ಬಾಣಂತಿ ಬಿಡುವ ಗುಡಿಸಲು ನಾಶ
ಲಾರಿಯಲ್ಲಿ ಬೆಂಕಿ ಕಂಡ ಕೂಡಲೇ ನಿರ್ವಾಹಕಿ ಶರಣಮ್ಮ ದೂರವಾಣಿ ಮೂಲಕ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು. ಕೂಡಲೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ನಿರ್ವಾಹಕಿಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.