ಕನ್ನಡ ಭಾಷಾಭಿಮಾನ ಅಗತ್ಯವಾಗಿದ್ದು, ಕನ್ನಡ ಭಾಷೆ, ನೆಲ ಜಲಕ್ಕಾಗಿ ಎಲ್ಲರೂ ಸದಾ ಸಿದ್ದರಾಗಿರಬೇಕು. ಅನ್ಯ ಭಾಷೆಗಳನ್ನು ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಇಳಕಲ್‌ನ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಯುವ ಜನತೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್
ತಹಶೀಲ್ದಾರ್ ಸತೀಶ ಕೂಡಲಗಿ ಸಂಭ್ರಮದಿಂದ ಸ್ವಾಗತಿಸಿ, “ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕೆಲೂರ ಗ್ರಾಮಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಯಶಸ್ವಿಯಾಗಿ ಸಾಗಲಿ” ಎಂದು ಹಾರೈಸಿದರು.
ಕಾಂಗ್ರೆಸ್ ಮುಖಂಡರು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಸದಸ್ಯರು, ಕರವೇ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡ ಪ್ರೇಮಿಗಳು ಇದ್ದರು.