ಮಹರ್ಷಿ ವಾಲ್ಮೀಕಿಯವರು ರಚಿಸಿರುವ ಶ್ರೀರಾಮಚಂದ್ರನ ಮಹಾಕಾವ್ಯ ರಾಮಾಯಣದಲ್ಲಿ ಮನುಕುಲಕ್ಕೆ ಒಳ್ಳೆಯದಾಗುವ ತತ್ವ ಸಿದ್ಧಾಂತಗಳು ಅಡಗಿವೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ, ಹುನಗುಂದ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಮುಂದಿನ ದಿನಮಾನಗಳಲ್ಲಿ ವಾಲ್ಮೀಕಿ ದೇವಸ್ಥಾನಕ್ಕೆ ಮೂರ್ತಿ ಪ್ರತಿಷ್ಠಾಪನೆ ಮತ್ತು ವೃತ್ತ ಉದ್ಘಾಟಿಸುವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುಚುದು. ಯಾವುದೇ ಸಮಾಜ ಒಗ್ಗಟ್ಟಾಗಿದ್ದಾಗ ಸರ್ಕಾರದ ಸವಲತ್ತುಗಳು ಮತ್ತು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾಧ್ಯ. ಸಮಾಜದ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲಾಗುವುದು” ಎಂದು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ
ದಿವ್ಯ ಸಾನಿಧ್ಯ ವಹಿಸಿದ್ದ ಪೂಜ್ಯ ಗುರುಮಹಾಂತ ಮಹಾ ಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ ನಂಬಿಕೆ, ಶೂರರು, ಸಮಾಜ ನಿಷ್ಠಾವಂತರು ಪ್ರಾಮಾಣಿಕತೆಗೆ ಹೆಸರುವಾಸಿಯಾದವರು ವಾಲ್ಮೀಕಿ ಜನಾಂಗದವರು ಎಂದರು.
ಇದೇ ಸಂದರ್ಭದಲ್ಲಿ ಪೂಜ್ಯ ಗುರುಮಹಾಂತ ಸ್ವಾಮಿಗಳು, ಶಾಸಕ ವಿಜಯಾನಂದ ಎಸ್ ಕಾಶಪ್ಪನವರ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ನಗರಸಭೆ ಸದಸ್ಯರಾದ ಹನಮಂತ ತುಂಬದ, ನಜ್ಜಾಬೇಗಂ ಬನ್ನಿಗೋಳ, ಶರಣಪ್ಪ ಅಮರಾವತಿ, ಮಲ್ಲೇಶ ಮಡಿವಾಳರ, ಇಳಕಲ್ ತಹಶೀಲ್ದಾರ್ ಎಸ್ ಬಿ ಕೂಡಲಗಿ, ವಾಲ್ಮೀಕಿ ಪೀಠದ ಧರ್ಮದರ್ಶಿ ಶಾಂತಕುಮಾರ ಸುರಪುರ, ಶರಣಪ್ಪ ಆಮದಿಹಾಳ, ಗಿಡ್ಡಪ್ಪ ಗಾಣದಾಳ, ಗುಂಡಪ್ಪಗೌಡ ಕರಡಿ, ವೆಂಕಣ್ಣ ತಪ್ಪಲದಡ್ಡಿ, ಸಮಾಜ ಸೇವಕ ವಿಠಲ ಜಕ್ಕಾ ಮೊದಲಾದವರನ್ನು ಗೌರವಿಸಿ ಸನ್ಮಾನಿಸಿದರು.