ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳೂ ಜಲಾವೃತವಾಗಿವೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ, ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮವು ಜಲಾವೃತವಾಗಿದೆ. ನದಿ ಸಮೀಪದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.
ಕಿತ್ತಲಿ-ಶಿರೋಳ ಗ್ರಾಮದ ನಡುವೆ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯ ಮೇಲೂ ನೀರು ಹರಿಯುತ್ತಿದ್ದು, ವಾಹನ ಸಂಚಾರ ಬಂದ್ ಆಗಿದೆ. ಗೋವನಕೊಪ್ಪದ ಹಳೆ ಸೇತುವೆ ಕೂಡ ಮುಳುಗಡೆಯಾಗಿದೆ.
ನದಿಯ ಇಕ್ಕೆಲಗಳಲ್ಲಿರುವ ಕೃಷಿ ಜಮೀನಿಗೂ ನೀರು ನುಗ್ಗಿದ್ದು, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕಬ್ಬು ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ.