ಬಾಗಲಕೋಟೆ | ಖಾಸಗಿ ಟೆಲಿಕಾಂ ಕಂಪನಿಗಳ ಮೊಬೈಲ್ ರೀಚಾರ್ಜ್‌ ಬೆಲೆ ಹೆಚ್ಚಳ; ಡಿಎಸ್ಎಸ್‌ ಖಂಡನೆ

Date:

Advertisements

ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‌ ಬೆಲೆ ಹೆಚ್ಚಳ ಮಾಡಿರುವುದನ್ನು ಕೂಡಲೇ ಹಿಂಪಡೆಯಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಕ್ರಮ ಕೈಗೊಳ್ಳಬೇಕು ಎಂದು ಡಿಎಸ್ಎಸ್‌(ನಾಗವಾರ ಬಣ) ಬಾಗಲಕೋಟೆ ಜಿಲ್ಲಾ ಸಂಘಟನಾ ಸಂಚಾಲಕ ಹನಮಂತ ಚಿಮ್ಮಲಗಿ ಆಗ್ರಹಿಸಿದ್ದಾರೆ.

ಬಾಗಲಕೋಟೆ ನಗರದಲ್ಲಿ ಪತ್ರಿಕೆ ಕೇಳಿಕೆ ನೀಡಿರುವ ಇವರು, “ಪ್ರಸ್ತುತ ದಿನಗಳಲ್ಲಿ ಇಂಟರ್‌ನೆಟ್, ಮೊಬೈಲ್ ಡೇಟಾ ಮತ್ತು ರೀಜಾರ್ಜ್‌ ಜನರ ಜೀವನದ ಅನಿವಾರ್ಯ ಭಾಗವಾಗಿದೆ. ಮತ್ತೊಂದೆಡೆ ನಿರುದ್ಯೋಗ ಮತ್ತು ಹಣದುಬ್ಬರದಿಂದಾಗಿ ದಿನಕ್ಕೆ ಎರಡು ಹೊತ್ತಿನ ಊಟಕ್ಕೂ ಜನಸಾಮಾನ್ಯರು ಪರದಾಡುವಂತಾಗಿದೆ. ಹಾಗಾಗಿ ಮೊಬೈಲ್ ಡೇಟಾ ಇಂದು ಎಷ್ಟು ಅವಶ್ಯವಾಗಿದೆ ಎಂದರೆ ಮೊಬೈಲ್ ರೀಚಾರ್ಜಗಾಗಿ ಹಣವನ್ನು ಉಳಿಸಲು ಹಸಿವಿನಿಂದ ಇರುವ ಅನಿವಾರ್ಯತೆಗೆ ಜನರು ಒಳಗಾಗಿದ್ದಾರೆ” ಎಂದರು.

“ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ತಕ್ಷಣವೇ ಮಧ್ಯ ಪ್ರವೇಶಿಸಿ, ರೀಚಾರ್ಜ್‌ ಮತ್ತು ಡೇಟಾ ಶುಲ್ಕಗಳಲ್ಲಿನ ಅನ್ಯಾಯಯುತವಾದ ಹೆಚ್ಚಳವನ್ನು ಸಂಪೂರ್ಣವಾಗಿ ಹಿಂಪಡೆಯಲು ಖಾಸಗಿ ಟೆಲಿಕಾಂ ಕಂಪನಿಗಳ ಮೇಲೆ ಒತ್ತಡ ಹೇರಬೇಕು” ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ರೈತನಿಗೆ ಭೂ ಪರಿಹಾರ ನೀಡುವಲ್ಲಿ ವಿಫಲ: ಟೂಡಾ ಕಚೇರಿಯ ಪೀಠೋಪಕರಣ ಜಪ್ತಿ

“ಸಾರ್ವಜನಿಕ ವಲಯದ ಟೆಲಿಕಾಂ ಕಂಪನಿ ಬಿಸ್‌ಎನ್‌ಎಲ್‌ ನೆಟ್‌ವರ್ಕ್‌ ಅನ್ನು ಪುನರುಜ್ಜೀವನಗೊಳಿಸಲು ಮತ್ತು ಸಂವಹನ ಸೇವೆಗಳು ಕೈಗೆಟುಕುವ ದರದಲ್ಲಿ ದೊರೆಯುವಂತಾಗಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X