ಬಾಗಲಕೋಟೆ | ಮೋದಿ ಸರ್ಕಾರ ಶೀಘ್ರದಲ್ಲೇ ಪತನ: ಸಚಿವ ಆರ್‌ ಬಿ ತಿಮ್ಮಾಪುರ ಅಭಿಪ್ರಾಯ

Date:

ಕೇಂದ್ರದ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆಯೇ ಹೊರತು ಕರ್ನಾಟಕದ ಕಾಂಗ್ರೆಸ್ ಸರ್ಕಾರವಲ್ಲ ಎಂದು ಅಬಕಾರಿ ಸಚಿವ ಆರ್‌ ಬಿ ತಿಮ್ಮಾಪುರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಅಲ್ಪಸಂಖ್ಯಾತ ಸ್ಥಾನಮಾನದಿಂದಾಗಿ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು. ಆದರೆ 136 ಮಂದಿ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗಿದ್ದೇವೆ” ಎಂದು ಕಾಂಗ್ರೆಸ್‌ ಸರ್ಕಾರದ ಸ್ಥಿರತೆಯನ್ನು ಖಾತ್ರಿಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ನೆಲಮಂಗಲದ ಗಣೇಶೋತ್ಸವ ಸಂದರ್ಭದ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿರುವ ಹೇಳಿಕೆ ಗಮನಿಸಿದರೆ ಚಿಲ್ಲರೆ ರಾಜಕೀಯ ಎನಿಸುತ್ತದೆ. ಪ್ರಧಾನಿ ಮೋದಿಯವರಿಗೆ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ತಿಳುವಳಿಕೆ ಕೊರತೆಯಿದೆ. ಹೀಗಾಗಿಯೇ ದೇಶದ ಪ್ರಧಾನಿಯೊಬ್ಬರು ಕೆಳಮಟ್ಟದಲ್ಲಿ ಮಾತನಾಡಿದ್ದನ್ನು ನೋಡಿದರೆ, ಅದು ಚಿಲ್ಲರೆ ರಾಜಕಾರಣ ಮಾಡಿದಂತಾಗುತ್ತದೆ” ತಿಮ್ಮಾಪುರ ಎಂದು ಸಚಿವ ಆರ್ ಬಿ ತಿಮ್ಮಾಪುರ ಅವರು ಕಟುವಾಗಿ ಟೀಕಿಸಿದ್ದಾರೆ.   

“ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ವಿರುದ್ಧದ ಬಲವಾದ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಅದು ದಲಿತ ವಿರೋಧಿ ಮತ್ತು ದಲಿತರು, ಅಲ್ಪಸಂಖ್ಯಾತರು ಮತ್ತು ಇತರೆ ಸಮುದಾಯಗಳ ಬಗ್ಗೆ ಕಾಳಜಿಯಿಲ್ಲ” ಎಂದು ಆರೋಪಿಸಿ, ಮೋದಿ ಸರ್ಕಾರದ ಅಹಿಂದ ವರ್ಗಗಳ ವಿರೋಧಿ ಮನಸ್ಥಿತಿಯಂತಹ ವಿವಿಧ ಘಟನೆಗಳು ಮತ್ತು ನೀತಿಗಳಿಂದ ಉಲ್ಲೇಖಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೃಷ್ಣಾನದಿಯಲ್ಲಿ ಶವ ಪತ್ತೆ

ಈ ಮೊದಲು ಕಾಂಗ್ರೆಸ್‌ನಲ್ಲಿದ್ದ ಶಾಸಕ ಮುನಿರತ್ನ ಬಿಜೆಪಿಗೆ ಹೋದನಂತರ ಅವರ ಮನಸ್ಥಿತಿ, ವಿಚಾರ ಬದಲಾವಣೆ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಕಲ್ಮೇಶ ಸಾರವಾಡ, ಸದುಗೌಡ, ಪಾಟೀಲ್ ಮುದಕಣ್ಣ ಅಂಬಿಗೇರ ಸೇರಿದಂತೆ ಪ್ರಮುಖರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...